ಬಳ್ಳಾರಿ ಗಣಿ ಕಂಪನಿಗಳ ಮೇಲೆ ತೆರಿಗೆ ಇಲಾಖೆ ದಾಳಿ
ಬೆಂಗಳೂರು : ಮಾಜಿ ಸಚಿವ ಅಲ್ಲಂ ವೀರಭದ್ರಪ್ಪ ಅವರ ಗಣಿ ಕಂಪನಿ ಸೇರಿದಂತೆ ಬಳ್ಳಾರಿ, ಸಂಡೂರು ಮತ್ತು ಹೊಸಪೇಟೆಯಲ್ಲಿನ ವಿವಿಧ ಗಣಿ ಕಂಪನಿಗಳ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ಹೊಸಪೇಟೆಯಲ್ಲಿ ಬಳ್ಳಾರಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಬ್ದುಲ್ ವಾಹಬ್ ಅವರ ಮಾಲೀಕತ್ವದ ಕಂಪನಿಗಳು ಮತ್ತು ಮನೆ ಮೇಲೆ ಏಕ ಕಾಲದಲ್ಲಿ ದಾಳಿ ನಡೆದಿದೆ. ದಾಳಿ ಸಂದರ್ಭದಲ್ಲಿ ಅನೇಕ ಮಹತ್ವದ ದಾಖಲೆ ಪತ್ರಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ಗುರುವಾರ ಒಂದೇ ದಿನದಲ್ಲಿ ದೇಶದ 500 ಪ್ರದೇಶಗಳಲ್ಲಿ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿದ್ದನ್ನು ಇಲ್ಲಿ ಸ್ಮರಿಸಬಹುದು.
(ದಟ್ಸ್ ಕನ್ನಡ ವಾರ್ತೆ)












Click it and Unblock the Notifications