ಕಂಬಾಲಪಲ್ಲಿ ಪ್ರಕರಣ : ಹೈಕೋರ್ಟ್‌ಗೆ ಮೇಲ್ಮನವಿ
ಬೆಂಗಳೂರು : ಕಂಬಾಲಪಲ್ಲಿ ಹತ್ಯಾಕಾಂಡದ ಆರೋಪಿಗಳ ಖುಲಾಸೆ ಪ್ರಶ್ನಿಸಿ ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದೆ.
ರಾಜ್ಯ ಪಬ್ಲಿಕ್ ಪ್ರಾಸಿಕ್ಯೂಟರ್ ದೊರೆರಾಜು ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಪ್ರಕರಣದ ಕುರಿತು ಮೇಲ್ಮನವಿ ಸಲ್ಲಿಸಲಾಗಿದ್ದು, ಆರೋಪಿಗಳಿಗೆ ಗರಿಷ್ಠ ಶಿಕ್ಷೆಯಾಗುವಂತೆ ಸರ್ಕಾರ ಹೋರಾಟ ನಡೆಸಲಿದೆ ಎಂದು ತಿಳಿಸಿದರು.
ಕೋಲಾರದ ವಿಚಾರಣಾ ನ್ಯಾಯಾಲಯ ಪ್ರಕರಣದ ಎಲ್ಲ 32 ಆರೋಪಿಗಳನ್ನು ಖುಲಾಸೆಗೊಳಿಸಿದ ಹಿನ್ನೆಲೆಯಲ್ಲಿ ಮೇಲ್ಮನವಿ ಸಲ್ಲಿಸಲಾಗಿದೆ.
ಕೋಲಾರ ಜಿಲ್ಲೆಯಲ್ಲಿನ ರಾಜಕೀಯ ವೈಷಮ್ಯದಿಂದ ಉಂಟಾದ ಕಂಬಾಲಪಲ್ಲಿ ಹತ್ಯಾಕಾಂಡದಲ್ಲಿ 7 ಜನ ಅಸುನೀಗಿದ್ದನ್ನು ಇಲ್ಲಿ ಸ್ಮರಿಸಬಹುದು.
(ದಟ್ಸ್ ಕನ್ನಡ ವಾರ್ತೆ)












Click it and Unblock the Notifications