ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಇನ್ಮುಂದೆ ಅಂಚೆ ಕಚೇರಿಯಲ್ಲೂ ಸ್ಟಾಂಪ್‌ ಡ್ಯೂಟಿ ಸಂಗ್ರಹ?

By Staff
|
Google Oneindia Kannada News

ಬೆಂಗಳೂರು : ನಕಲಿ ಛಾಪಾ ಕಾಗದ ತಡೆಯಲು ರಾಷ್ಟ್ರೀಕೃತ ಬ್ಯಾಂಕ್‌, ಅಂಚೆ ಕಚೇರಿ ಹಾಗೂ ಕೆಲವು ಸಹಕಾರಿ ಬ್ಯಾಂಕ್‌ಗಳಿಗೆ ಸ್ಟಾಂಪ್‌ ಡ್ಯೂಟಿ ವಸೂಲಿ ಕೆಲಸವನ್ನು ಸರ್ಕಾರ ಒಪ್ಪಿಸುವ ಸಾಧ್ಯತೆಯಿದೆ.

ಸದ್ಯಕ್ಕೆ ರೂ. 20, 50 ಹಾಗೂ 100ರ ಮುಖಬೆಲೆಯ ಛಾಪಾಕಾಗದಗಳು, ಸ್ಟೇಟ್‌ ಬ್ಯಾಂಕ್‌ ಆಫ್‌ ಮೈಸೂರು(ಎಸ್‌ಬಿಎಂ), ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ(ಎಸ್‌ಬಿಐ) ಹಾಗೂ ಸ್ಟೇಟ್‌ ಬ್ಯಾಂಕ್‌ ಆಫ್‌ ಹೈದರಾಬಾದ್‌ನ ಕೆಲವು ಶಾಖೆಗಳಲ್ಲಿ ಮಾತ್ರ ಲಭ್ಯವಿದೆ.

ಹೆಚ್ಚಿನ ಬ್ಯಾಂಕ್‌ ಶಾಖೆಗಳಿಗೆ ಈ ಸೌಲಭ್ಯವನ್ನು ವಿಸ್ತರಿಸುವಂತೆ ಸಾರ್ವಜನಿಕರು ಮನವಿ ಮಾಡಿದ ಹಿನ್ನೆಲೆಯಲ್ಲಿ, ಕಂದಾಯ ಸಚಿವ ಜಗದೀಶ್‌ ಶೆಟ್ಟರ್‌ ಅವರು ಜನವರಿ ತಿಂಗಳ ಕೊನೆಯಲ್ಲಿ ಸಭೆ ಕರೆದಿದ್ದರು. ಸಭೆಯಲ್ಲಿ ಸಚಿವರು ಈ ಬಗ್ಗೆ ಪೂರಕ ಭರವಸೆ ನೀಡಿದ್ದರು.

(ದಟ್ಸ್‌ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X