ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಹುಬ್ಬಳ್ಳಿಯಲ್ಲಿ ಲೈಂಗಿಕ ಅಲ್ಪಸಂಖ್ಯಾತರ ರಂಗಿನ ಉತ್ಸವ

By Staff
|
Google Oneindia Kannada News

ಹುಬ್ಬಳ್ಳಿ : ನಗರದಲ್ಲಿ ಲೈಂಗಿಕ ಅಲ್ಪಸಂಖ್ಯಾತರ ಸಾಂಸ್ಕೃತಿಕ ಉತ್ಸವವನ್ನು ಸುರಕ್ಷಾ ಸಂಘಟನೆ ಆಯೋಜಿಸಿದೆ.

ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ವಿವರ ನೀಡಿದ ಸುರಕ್ಷಾ ಸಂಘಟನೆಯ ಸಂಚಾಲಕ ಪಿ.ಆರ್‌.ಸುಪ್ರೀಮಾ, ಮಾ.18ರಂದು ನಡೆಯಲಿರುವ ಉತ್ಸವದಲ್ಲಿ ಲೈಂಗಿಕ ಅಲ್ಪಸಂಖ್ಯಾತರ(ಸಲಿಂಗಕಾಮಿಗಳು, ಹಿಜಡಾ) ಬೇಡಿಕೆಗಳು ಮತ್ತು ಮಾನವ ಹಕ್ಕುಗಳ ಬಗ್ಗೆ ಚರ್ಚೆ ನಡೆಯಲಿದೆ ಎಂದರು.

ಸಮಾಜ ಮತ್ತು ಕುಟುಂಬದ ಇತರೆ ಸದಸ್ಯರು, ಲೈಂಗಿಕ ಅಲ್ಪಸಂಖ್ಯಾತರನ್ನು ಒಪ್ಪಿಕೊಳ್ಳಬೇಕು. ಗೌರವ ಮತ್ತು ಸಮಾನತೆ ನೀಡಬೇಕು. ಈ ನಿಟ್ಟಿನಲ್ಲಿ ಸಮಾಜದ ಗಮನ ಸೆಳೆಯಲು ಉತ್ಸವ ಏರ್ಪಡಿಸಲಾಗಿದೆ.

ಸಾರ್ವಜನಿಕ ರ್ಯಾಲಿ ಮತ್ತು ಲೈಂಗಿಕ ಅಲ್ಪಸಂಖ್ಯಾತರಿಂದ ಅನೇಕ ಮನರಂಜನಾ ಕಾರ್ಯಕ್ರಮಗಳನ್ನು ನಡೆಸಲಾಗುತ್ತದೆ. ಉತ್ತರ ಕರ್ನಾಟಕದ ವಿವಿಧ ಜಿಲ್ಲೆಗಳಿಂದ 500ಕ್ಕೂ ಅಧಿಕ ಮಂದಿ ಉತ್ಸವಕ್ಕೆ ಆಗಮಿಸುತ್ತಿದ್ದಾರೆ ಎಂದು ಹೇಳಿದರು.

(ಯುಎನ್‌ಐ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X