3300 ಶಿಕ್ಷಕರ ನೇಮಕಾತಿ : 29ಮೀರಿದವರಿಗೆ ಶುಕ್ರದೆಸೆ!
ಬೆಂಗಳೂರು : 3,300 ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಕ್ಕೆ ಸರ್ಕಾರ ನಿರ್ಧರಿಸಿದೆ. 29ವರ್ಷ ಮೀರಿದ ಅಭ್ಯರ್ಥಿಗಳನ್ನು ಅರ್ಹತೆ ಆಧಾರದ ಮೇಲೆ ನೇರವಾಗಿ ನೇಮಕಮಾಡಿಕೊಳ್ಳಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಸವರಾಜ ಹೊರಟ್ಟಿ ಹೇಳಿದ್ದಾರೆ.
ಸಚಿವ ಸಂಪುಟ ಸಭೆ ನಂತರ ಸುದ್ದಿಗಾರರ ಜೊತೆ ಮಾತನಾಡುತ್ತಿದ್ದ ಅವರು, ಸರ್ಕಾರದ ಈ ನಿರ್ಧಾರದಿಂದ ವಯೋಮಿತಿ ಮೀರುತ್ತಿರುವ ಅಭ್ಯರ್ಥಿಗಳಿಗೆ ಅನುಕೂಲವಾಗಲಿದೆ ಎಂದರು.
ಖಾಸಗಿ ಅನುದಾನಿತ ಶಾಲೆಗಳಲ್ಲಿನ ಹೆಚ್ಚುವರಿ ಶಿಕ್ಷಕರನ್ನು ವಜಾ ಮಾಡುವ ಪ್ರಸ್ತಾಪವನ್ನು ಕೈಬಿಟ್ಟಿರುವುದಾಗಿ ತಿಳಿಸಿದ ಸಚಿವರು, ಹೆಚ್ಚುವರಿ ಶಿಕ್ಷಕರನ್ನು ಇನ್ನೊಂದು ಶಾಲೆಗೆ ವರ್ಗ ಮಾಡುವುದಾಗಿ ಹೇಳಿದರು.
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸ್ವಗ್ರಾಮವಾದ ಹರದನಹಳ್ಳಿಯನ್ನು ಮಾದರಿ ಗ್ರಾಮವಾಗಿ ಮಾಡುವುದಾಗಿ ಸಚಿವ ಹೊರಟ್ಟಿ ಘೋಷಿಸಿದರು.
(ದಟ್ಸ್ ಕನ್ನಡ ವಾರ್ತೆ)












Click it and Unblock the Notifications