ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಉಚಿತ ಇಂಜಿನೀಯರಿಂಗ್‌ ಸೀಟು 26,000ಕ್ಕೆ ಏರಿಕೆ...!?

By Staff
|
Google Oneindia Kannada News

ಮೈಸೂರು : ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ಇಂಜಿನೀಯರಿಂಗ್‌ ಕೋರ್ಸ್‌ನ ಉಚಿತ ಸೀಟುಗಳ ಸಂಖ್ಯೆಯನ್ನು 21,000ದಿಂದ 26,000ಕ್ಕೆ ಏರಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಿ.ಎಚ್‌.ಶಂಕರಮೂರ್ತಿ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಅವರು, ಸರ್ಕಾರ ಈ ಕುರಿತು ಈಗಾಗಲೇ ನಿರ್ಧಾರ ಕೈಗೊಂಡಿದೆ. ಇದಲ್ಲದೆ ವೈದ್ಯಕೀಯ ಕೋರ್ಸ್‌ನ ಉಚಿತ ಸೀಟುಗಳ ಸಂಖ್ಯೆಯನ್ನು 600ಕ್ಕೆ ಏರಿಸಲೂ ನಿರ್ಧರಿಸಲಾಗಿದೆ ಎಂದು ತಿಳಿಸಿದರು.

ಎರಡು ದಶಕಗಳಿಂದಲೂ ಪ್ರಥಮ ದರ್ಜೆ ಕಾಲೇಜು ಉಪನ್ಯಾಸಕರ ನೇಮಕಾತಿ ಮೇಲೆ ಹೇರಲಾಗಿದ್ದ ನಿಷೇಧವನ್ನು ತೆಗೆದುಹಾಕಲಾಗಿದ್ದು, 9,500 ಉಪನ್ಯಾಸಕರನ್ನು ನೇಮಿಸಿಕೊಳ್ಳಲು ಅನುಮತಿ ನೀಡಲಾಗಿದೆ. ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ ಕೆಲಸ ಮಾಡುತ್ತಿರುವ 225 ಸ್ಥಳೀಯ ಅಭ್ಯರ್ಥಿಗಳ ಸೇವೆಯನ್ನು ಒಂದು ತಿಂಗಳಲ್ಲಿ ಕಾಯಂಗೊಳಿಸಲಾಗುವುದು ಎಂದು ಅವರು ವಿವರಿಸಿದರು.

(ಏಜನ್ಸೀಸ್‌)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X