ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮೌಂಟ್‌ ಕಾರ್ಮೆಲ್‌ ಕಾಲೇಜಿಗೆ 1ಲಕ್ಷ ರೂ. ದಂಡ!?

By Staff
|
Google Oneindia Kannada News

ಬೆಂಗಳೂರು : ಅವೈಜ್ಞಾನಿಕವಾಗಿ ಕಸ ಕರಗಿಸಿದ್ದು ಮತ್ತು ಪರವಾನಗಿ ಪಡೆಯದೇ ಕ್ಯಾಂಟೀನ್‌ ಆರಂಭಿಸಿದ ಮೌಂಟ್‌ ಕಾರ್ಮೆಲ್‌ ಕಾಲೇಜಿಗೆ, ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ 1 ಲಕ್ಷ ರೂ. ದಂಡ ವಿಧಿಸಿದೆ.

ಅರಮನೆ ರಸ್ತೆಯಲ್ಲಿರುವ ಮೌಂಟ್‌ ಕಾರ್ಮೆಲ್‌ ಕಾಲೇಜು, ನಗರದ ಪ್ರತಿಷ್ಠಿತ ಕಾಲೇಜುಗಳಲ್ಲಿ ಒಂದು. ಇಲ್ಲಿನ ಅನಧಿಕೃತ ಕ್ಯಾಂಟೀನ್‌ ಮತ್ತು ಇತರೆ ಮೂಲಗಳಿಂದ ಕಸ ಉತ್ಪತ್ತಿಯಾಗುತ್ತಿದೆ. ಕಸವನ್ನು ನಿಯಮಾನುಸಾರ ವಿಲೇವಾರಿ ಮಾಡದೇ, ಅದಕ್ಕೆ ಬೆಂಕಿ ಇಡುತ್ತಿದ್ದ ಅಂಶ ಪತ್ತೆಯಾಗಿದೆ. ಇದರಿಂದ ಆರೋಗ್ಯದ ಮೇಲೆ ಪ್ರತಿಕೂಲ ಪರಿಣಾಮ ಉಂಟಾಗುವ ಸಾಧ್ಯತೆಗಳಿವೆ ಎನ್ನಲಾಗಿದೆ.

ಪಾಲಿಕೆ ಆರೋಗ್ಯ ವೈದ್ಯಾಧಿಕಾರಿ, ಕಾಲೇಜಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಾಲೇಜಿಗೆ ನೋಟಿಸ್‌ ನೀಡಲಾಗಿದ್ದು, ಒಂದು ಲಕ್ಷ ರೂ.ಗಳ ದಂಡ ವಿಧಿಸಿರುವುದಾಗಿ ಪಾಲಿಕೆ ತಿಳಿಸಿದೆ.

(ದಟ್ಸ್‌ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X