ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಗುರುವಾರದಿಂದ ದ್ವಿತೀಯ ಪಿಯೂಸಿ ಪರೀಕ್ಷೆ ಆರಂಭ

By Staff
|
Google Oneindia Kannada News

All the bestಬೆಂಗಳೂರು : ದ್ವಿತೀಯ ಪಿಯೂಸಿ ಪರೀಕ್ಷೆ, ಗುರುವಾರ(ಮಾಚ್‌ 29)ದಿಂದ ಏಪ್ರಿಲ್‌ 16ರ ವರೆಗೂ ನಡೆಯಲಿದೆ.

ಸುಮಾರು ನಾಲ್ಕೂವರೆ ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷೆಯಲ್ಲಿ ನಕಲು ತಡೆಯಲು ವ್ಯಾಪಕ ಕ್ರಮ ಕೈಗೊಳ್ಳಲಾಗಿದೆ. ಹೀಗಾಗಿ ನಕಲು ಶೂರರು ತಮ್ಮ ಪ್ರಯತ್ನಗಳನ್ನು ಕೈಬಿಟ್ಟರೆ ಒಳ್ಳೆಯದು.

ಪರೀಕ್ಷಾ ಕೇಂದ್ರದ ಸುತ್ತಮುತ್ತಲಿನ 200 ಮೀಟರ್‌ ಆವರಣವನ್ನು ನಿಷೇಧಿತ ಪ್ರದೇಶ ಎಂದು ಘೋಷಿಸಲಾಗುವುದು. ಪರೀಕ್ಷೆ ಸಮಯದಲ್ಲಿ ಸುತ್ತ ಮುತ್ತಲಿನ ಜೆರಾಕ್ಸ್‌ ಅಂಗಡಿಗಳನ್ನು ಮುಚ್ಚಲು ಆದೇಶಿಸಲಾಗಿದೆ ಎಂದು ಪಿಯೂ ಶಿಕ್ಷಣ ವಿಭಾಗದ ಉಪ ನಿರ್ದೇಶಕರು ಸುದ್ದಿಗಾರರಿಗೆ ತಿಳಿಸಿದ್ದಾರೆ.

(ದಟ್ಸ್‌ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X