ಓಬಿಸಿ: ಶೇ.27ರ ಮೀಸಲಾತಿಗೆ ಸುಪ್ರೀಂ ಕೋರ್ಟ್ ತಡೆ
ನವದೆಹಲಿ : ಐಐಟಿ, ಐಐಎಂ ಸೇರಿದಂತೆ ಉನ್ನತ ಸಂಸ್ಥೆಗಳಲ್ಲಿ ಹಿಂದುಳಿದ ವರ್ಗ(ಓಬಿಸಿ)ದ ವಿದ್ಯಾರ್ಥಿಗಳಿಗೆ ನೀಡಲಾಗಿದ್ದ ಶೇ. 27ರ ಮೀಸಲಾತಿಗೆ ಸುಪ್ರೀಂ ಕೋರ್ಟ್ ಗುರುವಾರ ತಡೆಯಾಜ್ಞೆ ನೀಡಿದೆ.
ಕೇಂದ್ರ ಸರ್ಕಾರ ಹಿಂದುಳಿದ ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳನ್ನು ಗುರ್ತಿಸುವಲ್ಲಿ ಸರಿಯಾದ ಕ್ರಮ ಅನುಸರಿಸಿಲ್ಲ. 1931ರ ಜನಗಣತಿಯನ್ನು ಆಧಾರವಾಗಿಟ್ಟುಕೊಂಡು, ಮೀಸಲಾತಿ ನಿಯಮ ರೂಪಿಸುವುದರಲ್ಲಿ ಅರ್ಥವಿಲ್ಲ ಎಂದು ಸುಪ್ರೀಂ ಕೋರ್ಟ್‌ನ ವಿಭಾಗೀಯ ಪೀಠ ಅಭಿಪ್ರಾಯ ಪಟ್ಟಿದೆ.
ಕೇಂದ್ರ ಸರ್ಕಾರ ಸಾಮಾಜಿಕವಾಗಿ ಹಾಗೂ ಆರ್ಥಿಕವಾಗಿ ಹಿಂದುಳಿದವರನ್ನು ಸರಿಯಾಗಿ ಗುರುತಿಸದ ಹೊರತು ಮೀಸಲಾತಿ ನೀತಿ ಜಾರಿಗೊಳಿಸುವುದು ಸಾಧ್ಯವಿಲ್ಲ ಎಂದು ಕೋರ್ಟ್ ಹೇಳಿದೆ.
ಹಲವಾರು ವೈದ್ಯ ವಿದ್ಯಾಥಿಗಳ ಸಂಘ, ಶಿಕ್ಷಣ ತಜ್ಞರು ಕೇಂದ್ರದ ಮೀಸಲಾತಿ ನೀತಿಯನ್ನು ಪ್ರಶ್ನಿಸಿ ಹೂಡಿದ್ದ ದಾವೆಗೆ ಉತ್ತರವಾಗಿ ಸುಪ್ರೀಂ ಕೋರ್ಟ್ ಈ ನಿರ್ಣಯವನ್ನು ಘೋಷಿಸಿದೆ.
(ಏಜನ್ಸೀಸ್)












Click it and Unblock the Notifications