ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಿ.ಇ ವಿದ್ಯಾರ್ಥಿಗಳಿಗೆ ಅಂತರ ಕಾಲೇಜು ವಿಜ್ಞಾನ ಮೇಳ

By Staff
|
Google Oneindia Kannada News

ಬೆಂಗಳೂರು: ನಗರದ ಪಿಇಎಸ್‌ ಇಂಜಿನೀಯರ್‌ ಕಾಲೇಜಿನ ವಿಜ್ಞಾನ ವಿಭಾಗವು ಏಪ್ರಿಲ್‌ 5 ರಂದು ಅಂತರ ಕಾಲೇಜು ಮಟ್ಟದ ವಿಜ್ಞಾನ ಮೇಳವನ್ನು ಹಮ್ಮಿಕೊಂಡಿದೆ.

ವಿಜ್ಞಾನಕ್ಕೆ ಸಂಬಂಧಿಸಿದ ಚಿತ್ರ ಪ್ರದರ್ಶನ, ಚರ್ಚಾ ಸ್ಪರ್ಧೆ, ರಸಪ್ರಶ್ನೆ ಕಾರ್ಯಕ್ರಮಗಳು ಈ ವಿಜ್ಞಾನ ಮೇಳದಲ್ಲಿರುತ್ತವೆ. ಬಿ.ಇ. ಎರಡನೇ ಸೆಮಿಸ್ಟರ್‌ ವಿದ್ಯಾರ್ಥಿ/ನಿಯರಿಗೆ ಮಾತ್ರ ಈ ಮೇಳದಲ್ಲಿ ಪಾಲ್ಗೊಳ್ಳಲು ಅವಕಾಶ ಕಲ್ಪಿಸಲಾಗಿದೆ.

ಆಸಕ್ತ ವಿದ್ಯಾರ್ಥಿ/ನಿಯರು ಮೇಳದ ದಿನ(ಏಪ್ರಿಲ್‌ 5) ಬೆಳಗ್ಗೆ 8 ರಿಂದ 10 ಗಂಟೆ ಒಳಗೆ ನೊಂದಾಯಿಸಿಕೊಳ್ಳಬೇಕಾಗುತ್ತದೆ. ವಿಜ್ಞಾನ ಮೇಳವು ಬೆಳಗ್ಗೆ 8 ರಿಂದ ಸಂಜೆ 4 ಗಂಟೆವರೆಗೂ ಇರುತ್ತದೆ.

ಹೆಚ್ಚಿನ ವಿವರಗಳಿಗಾಗಿ ಸಂಪರ್ಕಿಸಿ: 080-2672 1983, 2672 0788

(ದಟ್ಸ್‌ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X