ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪ್ರೊ.ಬೆಳ್ಳಿಯಪ್ಪ ರಾಜೀವ್‌ ಗಾಂಧಿ ವಿವಿ ಉಪ ಕುಲಪತಿ

By Staff
|
Google Oneindia Kannada News

ಮೈಸೂರು : ಮೈಸೂರು ವಿಶ್ವವಿದ್ಯಾಲಯದ ಇಂಗ್ಲಿಷ್‌ ಪ್ರಾಧ್ಯಾಪಕ ಪ್ರೊ.ಕೆ.ಸಿ.ಬೆಳ್ಳಿಯಪ್ಪ ಅರುಣಾಚಲ ಪ್ರದೇಶದ ರಾಜೀವ್‌ಗಾಂಧಿ ವಿಶ್ವವಿದ್ಯಾಲಯದ ಉಪಕುಲಪತಿಯಾಗಿ ಆಯ್ಕೆಯಾಗಿದ್ದಾರೆ.

ಕೇಂದ್ರ ಮಾನವ ಸಂಪನ್ಮೂಲಗಳ ಅಭಿವೃದ್ಧಿ ಇಲಾಖೆ ಈ ಕುರಿತು ಆದೇಶ ಹೊರಡಿಸಿದೆ. ಏಪ್ರಿಲ್‌ 9ರಿಂದ ಅವರ ಅಧಿಕಾರಾವಧಿ ಆರಂಭವಾಗಲಿದ್ದು, ಮುಂದಿನ 5ವರ್ಷಗಳ ಕಾಲ ಹುದ್ದೆಯಲ್ಲಿ ಮುಂದುವರಿಯಲಿದ್ದಾರೆ. ಇಟಾನಗರದಲ್ಲಿರುವ ಈ ವಿಶ್ವವಿದ್ಯಾಲಯದ ಮೊಟ್ಟಮೊದಲ ಉಪಕುಲಪತಿ ಎಂಬ ಕೀರ್ತಿಗೂ ಅವರು ಪಾತ್ರರಾಗಲಿದ್ದಾರೆ.

ಮೈಸೂರು ವಿವಿಯಲ್ಲಿ ಸ್ನಾತಕೋತ್ತರ ಪದವಿ ಹಾಗೂ ಪಿಎಚ್‌.ಡಿ., ಪದವಿ ಮುಗಿಸಿರುವ ಅವರು ಅನೇಕ ಪುಸ್ತಕಗಳನ್ನು ಬರೆದಿದ್ದಾರೆ. ನ್ಯಾಕ್‌, ಯುಜಿಸಿ ಹಾಗೂ ಎಐಸಿಟಿಇ ಮೊದಲಾದ ಸಂಸ್ಥೆಗಳಲ್ಲಿ ಅವರು ಈ ಮೊದಲು ಜವಾಬ್ದಾರಿಯುತ ಹುದ್ದೆಗಳನ್ನು ನಿರ್ವಹಿಸಿದ್ದಾರೆ.

(ಯುಎನ್‌ಐ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X