ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬೆಂಗಳೂರು-ಹಾವೇರಿಯಲ್ಲಿ ಧಾರಾಕಾರ ಸುರಿದ ಮಳೆ

By Staff
|
Google Oneindia Kannada News

ಬೆಂಗಳೂರು : ನಗರದಲ್ಲಿ ಶನಿವಾರ ರಾತ್ರಿಯಿಂದ ಭಾನುವಾರ ಬೆಳಗಿನವರೆಗೆ ಧಾರಾಕಾರವಾಗಿ ಮಳೆ ಸುರಿದಿದ್ದು, 8ಸೆಂಟೀಮೀಟರ್‌ನಷ್ಟು ದಾಖಲಾಗಿದೆ.

ರಾಜ್ಯದ ದಕ್ಷಿಣ ಒಳನಾಡಿನ ಅನೇಕ ಕಡೆ, ಉತ್ತರ ಒಳನಾಡು ಹಾಗೂ ಕರಾವಳಿಗಳ ಕೆಲವೆಡೆಯೂ ಮಳೆಯಾಗಿದೆ. ಹಾವೇರಿಯಲ್ಲಿ 7ಸೆಂಟೀಮೀಟರ್‌ನಷ್ಟು ಮಳೆ ದಾಖಲಾಗಿದೆ.

ಸಕಲೇಶಪುರದಲ್ಲಿ 5ಸೆಂಟೀಮೀಟರ್‌, ಹೊಸಕೋಟೆಯಲ್ಲಿ 4, ರಾಮನಗರ, ಚನ್ನಪಟ್ಟಣಗಳಲ್ಲಿ 3ಸೆಂಟೀಮೀಟರ್‌, ಎಚ್‌.ಡಿ.ಕೋಟೆ, ತೊಂಡೇಬಾವಿಯಲ್ಲಿ 2ಸೆಂಟೀಮೀಟರ್‌, ಹೊನ್ನಾವರ, ಪಣಂಬೂರು, ಮಡಿಕೇರಿ ಹಾಗೂ ಚಿತ್ರದುರ್ಗದಲ್ಲಿ ತಲಾ 1ಸೆಂಟೀಮೀಟರ್‌ ಮಳೆ ಸುರಿದಿದೆ.

ರಾಜ್ಯದ ಗರಿಷ್ಠ ತಾಪಮಾನ 39.9ಡಿಗ್ರಿ ಸೆಲ್ಸಿಯಸ್‌ ರಾಯಚೂರಿನಲ್ಲಿ ದಾಖಲಾಗಿದೆ.

ಹವಾಮಾನ ಮುನ್ಸೂಚನೆ(ಮಂಗಳವಾರ ಮುಂಜಾನೆಯವರೆಗೆ) : ರಾಜ್ಯದ ದಕ್ಷಿಣ ಒಳನಾಡಿನ ಕೆಲವೆಡೆ, ಉತ್ತರ ಒಳನಾಡು ಹಾಗೂ ಕರಾವಳಿಯ ಅಲ್ಲಲ್ಲಿ ಮಳೆಯಾಗುವ ಲಕ್ಷಣಗಳಿವೆ.

ನಗರದ ಹವಾಮಾನ ಮುನ್ಸೂಚನೆ : ಭಾಗಶಃ ಮೋಡಕವಿದ ವಾತಾವರಣವಿರಲಿದ್ದು, ಸಂಜೆ ಅಥವಾ ರಾತ್ರಿ ಗುಡುಗು ಸಿಡಿಲಿನಿಂದ ಕೂಡಿದ ಮಳೆ ಬೀಳುವ ನಿರೀಕ್ಷೆಯಿದೆ. ಗರಿಷ್ಠ ತಾಪಮಾನ 33 ಡಿಗ್ರಿ ಸೆಲ್ಸಿಯಸ್‌ನಷ್ಟು ಮುಂದುವರಿಯಲಿದೆ.

(ದಟ್ಸ್‌ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X