ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರೇವಣ್ಣನ ಜಿಲ್ಲೆಗೆ 11 ಸರ್ಕಾರಿ ಪ್ರಥಮ ದರ್ಜೆ ಕಾಲೇಜು

By Staff
|
Google Oneindia Kannada News

ಹಾಸನ : 11 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು ಹಾಸನದಲ್ಲಿ ತಲೆ ಎತ್ತಲಿವೆ. ಈ ಶೈಕ್ಷಣಿಕ ವರ್ಷದಿಂದಲೇ ಚಟುವಟಿಕೆ ಆರಂಭಿಸಲಿವೆ ಎಂದು ಲೋಕೋಪಯೋಗಿ ಮತ್ತು ಇಂಧನ ಖಾತೆ ಸಚಿವ ಹೆಚ್‌.ಡಿ.ರೇವಣ್ಣ ಹೇಳಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡುತ್ತಿದ್ದ ಅವರು, ಹಾಸನ ಮತ್ತು ಹೊಳೆನರಸೀಪುರದಲ್ಲಿ ಗೃಹವಿಜ್ಞಾನ ಕಾಲೇಜುಗಳು ಆರಂಭಗೊಳ್ಳಲಿವೆ. ಅಲ್ಲದೇ, ಹೊಳೆನರಸೀಪುರದಲ್ಲಿ ಕಾನೂನು ಕಾಲೇಜು ಕಾರ್ಯರಂಭಗೊಳ್ಳಲಿದೆ ಎಂದು ವಿವರಿಸಿದರು.

ಚನ್ನರಾಯಪಟ್ಟಣ ತಾಲೂಕಿನ ಹಿರಿಸಾವೆ, ಉದಯಗಿರಿ, ಹಳೆಬೀಡು, ಮೊಸಳೆ ಹೊಸಹಳ್ಳಿಯಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆರಂಭಗೊಳ್ಳಲಿವೆ ಎಂದು ರೇವಣ್ಣ ತಿಳಿಸಿದರು.

(ದಟ್ಸ್‌ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X