ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮೇ 9ರಂದು ಪರೀಕ್ಷೆ ಬರೆದು ವೆಬ್‌ನಲ್ಲಿ ಉತ್ತರ ನೋಡಿ!

By Staff
|
Google Oneindia Kannada News

ಬೆಂಗಳೂರು : ವೃತ್ತಿ ಶಿಕ್ಷಣ ಪ್ರವೇಶ ಪರೀಕ್ಷೆ (ಸಿಇಟಿ ) ಬರೆಯುವ ಎಲ್ಲಾ ಅರ್ಭರ್ಥಿಗಳ ಉತ್ತರ ಪತ್ರಿಕೆಯನ್ನು ಸಿಇಟಿ ವೆಬ್‌ಸೈಟ್‌ ( http://cet.kar.nic.in/ )ನಲ್ಲಿ ಪ್ರಕಟಿಸಲಾಗುತ್ತದೆ.

ಪರೀಕ್ಷೆಯಾದ 3-4 ದಿನಗಳಲ್ಲಿ ಉತ್ತರ ಪತ್ರಿಕೆ ಪ್ರಕಟಿಸಲು ನಿರ್ಧರಿಸಲಾಗಿದೆ ಎಂದು ಎಂದು ಉನ್ನತ ಶಿಕ್ಷಣ ಸಚಿವ ಡಿ.ಎಚ್‌. ಶಂಕರ ಮೂರ್ತಿ ಸುದ್ದಿಗಾರರಿಗೆ ಹೇಳಿದ್ದಾರೆ.

ಮೇ ತಿಂಗಳ 9ರಂದು ವೃತ್ತಿ ಶಿಕ್ಷಣ ಪ್ರವೇಶ ಪರೀಕ್ಷೆ (ಸಿಇಟಿ) ನಡೆಯಲಿದೆ. ಈ ವರ್ಷ ಸುಮಾರು 1.7 ಲಕ್ಷಅಭ್ಯರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಕಳೆದ ವರ್ಷ 84 ಸಾವಿರ ಮಂದಿ ಪರೀಕ್ಷೆ ಬರೆದಿದ್ದರು. ಪ್ರಸ್ತುತ ಶೈಕ್ಷಣಿಕ ವರ್ಷದಿಂದಲೇ 5 ಹೊಸ ಇಂಜಿನೀಯರಿಂಗ್‌ ಕಾಲೇಜುಗಳನ್ನು ಪ್ರಾರಂಭಿಸಲಾಗುವುದು ಎಂದು ಶಿಕ್ಷಣ ಸಚಿವರು ಮಾಹಿತಿ ನೀಡಿದ್ದಾರೆ.

ಕಾಮೆಡ್‌-ಕೆ ಪರೀಕ್ಷೆ : ವೃತ್ತಿ ಶಿಕ್ಷಣ ಪ್ರವೇಶಕ್ಕಾಗಿ ಮೇ.6ರಂದು ಕಾಮೆಡ್‌-ಕೆ ಪರೀಕ್ಷೆ ನಡೆಯಲಿದೆ. 66, 720 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಲಿದ್ದಾರೆ.

(ದಟ್ಸ್‌ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X