ಡೆಲ್ಲಿ ದೊರೆಗಳಿಗೆ ಕಾವೇರಿ ಹೋರಾಟ ಸಮಿತಿಯ ಎಚ್ಚರಿಕೆ Friday, May 04 2007, 16:15 Hrs (IST)

Kaveri Horata samiti Protest in New Delhiನವದೆಹಲಿ : ಕಾವೇರಿ-ಕೃಷ್ಣಾ ಹೋರಾಟ ಸಮನ್ವಯ ಸಮಿತಿ ಮತ್ತು ಕರ್ನಾಟಕ ರಕ್ಷಣಾ ವೇದಿಕೆ ಸದಸ್ಯರು ನಗರದ ಜಂತರ್‌ ಮಂತರ್‌ನಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.

ಕಾವೇರಿ ಸಮಸ್ಯೆಯನ್ನು ಕೂಡಲೇ ಬಗೆ ಹರಿಸದಿದ್ದರೇ, ಮುಂದಾಗುವ ಅನಾಹುತಗಳಿಗೆ ನಾವು ಜವಾಬ್ದಾರರಲ್ಲ. ಕೇಂದ್ರ ಸರ್ಕಾರವೇ ಹೊಣೆ ಹೊರಬೇಕಾಗುತ್ತದೆ ಎಂದು ಪ್ರತಿಭಟನಾಕಾರರು ಎಚ್ಚರಿಸಿದರು.

ಕಾವೇರಿ ನ್ಯಾಯಮಂಡಳಿ ತೀರ್ಪನ್ನು ವಿರೋಧಿಸಿ, ನೂರಾರು ದಿನಗಳಿಂದ ಕರ್ನಾಟಕ ಪ್ರತಿಭಟನೆ ನಡೆಸುತ್ತಿದೆ. ಆದರೆ ನಮ್ಮ ಕೂಗನ್ನು ದೆಹಲಿ ದೊರೆಗಳು ಕೇಳಿಸಿಕೊಂಡಿಲ್ಲ ಎಂದು ಪ್ರತಿಭಟನಾಕಾರರು ದೂರಿದರು.

ಪ್ರತಿಭಟನೆಯಲ್ಲಿ ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್‌, ರಕ್ಷಣಾ ವೇದಿಕೆ ಅಧ್ಯಕ್ಷ ಟಿ.ಎ.ನಾರಾಯಣಗೌಡ, ಬಿಜೆಪಿ ಶಾಸಕ ರಘು, ಮೈಸೂರು ಶಾಸಕ ಸೋಮಶೇಖರ್‌ ಸೇರಿದಂತೆ ವಿವಿಧ ಜನಪ್ರತಿನಿಧಿಗಳು ಪಾಲ್ಗೊಂಡಿದ್ದಾರೆ. ಸಾವಿರಾರು ಮಂದಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ.

ಮೇ.1ರಿಂದ ನವದೆಹಲಿಯಲ್ಲಿ ಕಾವೇರಿಗಾಗಿ ಧರಣಿ ನಡೆಯುತ್ತಿದೆ.

(ದಟ್ಸ್‌ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+