ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಏಪ್ರಿಲ್‌ 2008ಕ್ಕೆ ಅಂತಾರಾಷ್ಟ್ರೀಯ ವಿಮಾನನಿಲ್ದಾಣ ರೆಡಿ

By Staff
|
Google Oneindia Kannada News

ಬೆಂಗಳೂರು : ಬಹುನಿರೀಕ್ಷಿತ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನನಿಲ್ದಾಣ ಏಪ್ರಿಲ್‌ 2008ರ ವೇಳೆಗೆ ಸಿದ್ಧಗೊಳ್ಳಲಿದೆ ಎಂದು ಉಪಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದ್ದಾರೆ.

ವಿವಿಧ ಇಲಾಖೆಗಳೊಂದಿಗೆ ಪರಿಶೀಲನಾ ಸಭೆ ನಡೆಸಿದನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತಾ, ವಿಮಾನನಿಲ್ದಾಣದ ಬಹುತೇಕ ಕಾಮಗಾರಿ ಮುಗಿದಿದೆ. ಜನವರಿ 2008ರಲ್ಲಿ ಪ್ರಾಯೋಗಿಕ ಹಾರಾಟ ಆರಂಭವಾಗಲಿದ್ದು, ಏಪ್ರಿಲ್‌ 2008ರಿಂದ ವಿಮಾನನಿಲ್ದಾಣ ಕಾರ್ಯಾರಂಭ ಮಾಡಲಿದೆ ಎಂದು ಸ್ಪಷ್ಟಪಡಿಸಿದರು.

ಹಲವು ಅಂತಾರಾಷ್ಟ್ರೀಯ ಸಂಸ್ಥೆಗಳು ಹಾಸನ, ಗುಲ್ಬರ್ಗಾ, ಬಿಜಾಪುರ ಹಾಗೂ ಶಿವಮೊಗ್ಗಗಳಲ್ಲಿ ವಿಮಾನನಿಲ್ದಾಣಗಳನ್ನು ನಿರ್ಮಿಸಲು ಆಸಕ್ತಿ ತೋರಿವೆ. ಈ ನಿಟ್ಟಿನಲ್ಲಿ ಭೂಮಿ ಗುರುತಿಸುವ ಹಾಗೂ ಸ್ವಾಧೀನಪಡಿಸಿಕೊಳ್ಳುವ ಕಾರ್ಯ ಪೂರ್ಣಗೊಂಡಿದೆ. ಇದಲ್ಲದೆ ಪ್ರವಾಸೋದ್ಯಮ ಉತ್ತೇಜಿಸುವ ದೃಷ್ಟಿಯಿಂದ ರಾಜ್ಯಾದ್ಯಂತ 20 ಸ್ಥಳಗಳಲ್ಲಿ ಸರ್ವಋತು ಹೆಲಿಪ್ಯಾಡ್‌ಗಳನ್ನು ನಿರ್ಮಿಸಲಾಗುವುದು. ಇದಕ್ಕಾಗಿ 2ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ಅವರು ತಿಳಿಸಿದರು.

ಬೀದರ್‌ ವಿಮಾನನಿಲ್ದಾಣವನ್ನು ನಾಗರಿಕ ಸೇವೆಗಾಗಿ ಬಳಸಿಕೊಳ್ಳಲು, ರಕ್ಷಣಾ ಇಲಾಖೆ ಅನುಮತಿ ನೀಡಿದೆ. ಈ ಉದ್ದೇಶಕ್ಕಾಗಿ ಬೀದರ್‌ನ ಭಾರತೀಯ ವಾಯುಪಡೆ ನೆಲೆಗೆ, ರಾಜ್ಯ ಸರ್ಕಾರ 100 ಎಕರೆ ಹೆಚ್ಚುವರಿ ಭೂಮಿ ಒದಗಿಸಲು ನಿರ್ಧರಿಸಿದೆ ಎಂದು ಅವರು ವಿವರಿಸಿದರು.

(ಯು ಎನ್‌ ಐ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X