• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಮುದ್ದೇಬಿಹಾಳ : ಜಾತ್ರೆಯೂಟ ಮಾಡಿ 250 ಜನ ಅಸ್ವಸ್ಥ

By Staff
|

ಬಿಜಾಪುರ : ಮುದ್ದೇಬಿಹಾಳ ತಾಲೂಕಿನ ಕಾಶಿನಕುಂಟಾ ಗ್ರಾಮದಲ್ಲಿ, ಜಾತ್ರೆಯೂಟ ಮಾಡಿದ ಸುಮಾರು 250 ಜನ ಅಸ್ವಸ್ಥಗೊಂಡಿದ್ದಾರೆ.

ಕೆಲವರು ಮಂಗಳವಾರ ಬೆಳಗ್ಗೆ ಚೇತರಿಸಿಕೊಳ್ಳುತ್ತಿದ್ದಾರೆ. ಸೋಮವಾರ(ಮೇ 14) ರಾತ್ರಿ ಊಟ ಮಾಡಿದ ತಕ್ಷಣ ಜನರಿಗೆ ಹೊಟ್ಟೆನೋವು ಹಾಗೂ ವಾಂತಿಯಾಗಿದೆ. ತಕ್ಷಣವೇ ಚಿಕಿತ್ಸೆಗಾಗಿ ಕಾಳಗಿ ಹಾಗೂ ನಿಡಗುಂದಿಯಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಸಾಗಿಸಲಾಯಿತು. ಆದರೆ ಅಲ್ಲಿ ಸೂಕ್ತ ಸೌಲಭ್ಯಗಳಿಲ್ಲದ ಕಾರಣ ಬಿಜಾಪುರದ ಸಿವಿಲ್‌ ಆಸ್ಪತ್ರೆಗೆ ಕರೆದೊಯ್ಯಲಾಯಿತು.

25ಕ್ಕೂ ಹೆಚ್ಚು ವೈದ್ಯರು ಚಿಕಿತ್ಸೆ ನೀಡುತ್ತಿದ್ದು, ಅಸ್ವಸ್ಥರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಗೋಟಿಹಾಳ ತಿಳಿಸಿದರು.

ಜಿಲ್ಲಾ ಉಸ್ತುವಾರಿ ಹಾಗೂ ಜವಳಿ ಖಾತೆ ಸಚಿವ ಅಪ್ಪು ಪಟ್ಟಣಶೆಟ್ಟಿ ಆಸ್ಪತ್ರೆಗೆ ಭೇಟಿ ನೀಡಿ ಅಸ್ವಸ್ಥರ ಆರೋಗ್ಯ ವಿಚಾರಿಸಿದರು. ಆನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಘಟನೆಗೆ ಸಂಬಂಧಪಟ್ಟಂತೆ ವಿಚಾರಣೆ ನಡೆಸಲಾಗುವುದು. ಇನ್ನು ಮುಂದೆ ಜಾತ್ರಾ ಮಹೋತ್ಸವಗಳಲ್ಲಿ ನಡೆಯುವ ಅನ್ನ ಸಂತರ್ಪಣೆಯಲ್ಲಿ, ಆಹಾರ ಪರೀಕ್ಷಿಸಲು ಜಿಲ್ಲಾಡಳಿತ ಕ್ರಮಕೈಗೊಳ್ಳಲಿದೆ ಎಂದು ಹೇಳಿದರು.

(ಯುಎನ್‌ಐ)

ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more