ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮುಗಿದ ಗ್ರಹಣ : ಸೆಪ್ಟೆಂಬರ್‌ನಲ್ಲಿ ವಿಶ್ವ ಕನ್ನಡ ಸಮ್ಮೇಳನ

By Staff
|
Google Oneindia Kannada News

ಬೆಂಗಳೂರು : ಬೆಳಗಾವಿಯ ವಿಶ್ವಕನ್ನಡ ಸಮ್ಮೇಳನಕ್ಕೆ ಹಿಡಿದಿದ್ದ ಗ್ರಹಣ ಬಿಟ್ಟಂತಿದೆ. ಸೆಪ್ಟೆಂಬರ್‌ನಲ್ಲಿ ಶತಗತಾಯ ಸಮ್ಮೇಳನ ನಡೆಸಬೇಕೆಂದು ಸರ್ಕಾರ ನಿರ್ಧರಿಸಿದೆ.

ಕಳೆದ ಫೆಬ್ರವರಿಯಲ್ಲಿ ನಡೆಯಬೇಕಿದ್ದ ಸಮ್ಮೇಳನ, ನಾನಾ ಕಾರಣಗಳಿಂದ ಮುಂದೂಡಲ್ಪಟ್ಟಿತು. ಆನಂತರ ಆ ಪ್ರಸ್ತಾಪಗಳೇ ಇರಲಿಲ್ಲ. ಇದೀಗ ಸಚಿವ ಸಂಪುಟದ ಉಪಸಮಿತಿ, ಸಮ್ಮೇಳನವನ್ನು ಸೆಪ್ಟೆಂಬರ್‌ನಲ್ಲಿ ನಡೆಸಲು ನಿರ್ಧರಿಸಿದೆ.

ಈ ಬಗ್ಗೆ ಸುದ್ದಿಗಾರರಿಗೆ ಮಾಹಿತಿ ನೀಡಿದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಹೆಚ್‌.ಎಸ್‌.ಮಹದೇವ್‌ ಪ್ರಸಾದ್‌, ಸಮ್ಮೇಳನಕ್ಕಾಗಿ ಈಗಾಗಲೇ 9ಕೋಟಿ ಬಿಡುಗಡೆಯಾಗಿದೆ. ಇನ್ನೂ ನಾಲ್ಕು ಕೋಟಿ ರೂಪಾಯಿಗೆ ಮನವಿ ಬಂದಿದೆ. ಸಮ್ಮೇಳನದ ಸಿದ್ಧತೆಗಳು ಇನ್ಮುಂದೆ ಆರಂಭಗೊಳ್ಳಲಿವೆ ಎಂದರು.

ಕನ್ನಡಕ್ಕೆ ಶಾಸ್ತ್ರೀಯ ಸ್ಥಾನ ಮಾನ ಕಲ್ಪಿಸುವ ವಿಚಾರಕ್ಕೆ ಸಂಬಂಧಿಸಿದಂತೆ, ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕುತ್ತೇವೆ. ಈ ನಿಟ್ಟಿನಲ್ಲಿ ಸರ್ವಪಕ್ಷಗಳ ನಿಯೋಗ ಸದ್ಯದಲ್ಲಿಯೇ ದೆಹಲಿಗೆ ತೆರಳಲಿದೆ ಎಂದು ಹೇಳಿದರು.

(ದಟ್ಸ್‌ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X