ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪಿಯುಸಿ ಫಲಿತಾಂಶದಲ್ಲಿ ದ.ಕನ್ನಡ ಫಸ್ಟ್‌, ಬೀದರ್‌ ಲಾಸ್ಟ್‌

By Staff
|
Google Oneindia Kannada News

ಬೆಂಗಳೂರು : ಪ್ರಸಕ್ತ ವರ್ಷದ ಪಿಯುಸಿ ಫಲಿತಾಂಶದ ಚಿತ್ರಣ ಹೊರಬಿದ್ದಿದ್ದು, ಈ ಸಲವೂ ವಿದ್ಯಾರ್ಥಿನಿಯರೇ ಮೇಲುಗೈ.

ಶೇ.50.64ರಷ್ಟು ಹೊಸ ಪಠ್ಯ ಅಭ್ಯಾಸ ಮಾಡಿದ ವಿದ್ಯಾರ್ಥಿಗಳು ಈ ಸಲ ಉತ್ತೀರ್ಣರಾಗಿದ್ದಾರೆ. ಅಲ್ಲದೇ ಹಳೆ ಪಠ್ಯದ 13.17ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ಅತಿ ಹೆಚ್ಚಿನ ಸಂಖ್ಯೆಯಲ್ಲಿ ಅಂದರೆ ಶೇ.80.33 ವಿದ್ಯಾರ್ಥಿಗಳು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಉತ್ತೀರ್ಣರಾಗಿದ್ದು, ಜಿಲ್ಲೆ ಪ್ರಥಮ ಸ್ಥಾನದಲ್ಲಿದೆ. ಶೇ.20.30 ಫಲಿತಾಂಶದ ಮೂಲಕ ಬೀದರ್‌ ಕಡೆಯ ಸ್ಥಾನದಲ್ಲಿದೆ.

ವಿಜ್ಞಾನ ವಿಭಾಗದಲ್ಲಿ ಶಿವಮೊಗ್ಗ(ಶೇ.98), ವಾಣಿಜ್ಯ ವಿಭಾಗದಲ್ಲಿ ಬೆಂಗಳೂರು ಗ್ರಾಮಾಂತರ(97.6), ಕಲಾ ವಿಭಾಗದಲ್ಲಿ ಧಾರವಾಡ(94.)ದ ವಿದ್ಯಾರ್ಥಿ/ನಿ ಅತಿ ಹೆಚ್ಚು ಅಂಕಗಳನ್ನು ಪಡೆದಿದ್ದಾರೆ. ಕಲಾವಿಭಾಗದಲ್ಲಿ ಅತ್ಯುನ್ನತ ದರ್ಜೆಯಲ್ಲಿ ಉತ್ತೀರ್ಣರಾದವರು, ಕನ್ನಡ ಮಾಧ್ಯಮ ವ್ಯಾಸಂಗ ಮಾಡಿದವರು ಎಂಬುದು ಹೆಮ್ಮೆಯ ಸಂಗತಿ.

ಸುದ್ದಿಗೋಷ್ಠಿಯಲ್ಲಿ ಈ ವಿವರಗಳನ್ನು ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕ ಎಸ್‌.ಜಿ.ಹೆಗಡೆ ಬಿಡುಗಡೆ ಮಾಡಿದ್ದಾರೆ.

(ದಟ್ಸ್‌ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X