ಬಳ್ಳಾರಿ: ಮದುವೆ ದಿಬ್ಬಣದ ಲಾರಿಗೆ ಬಸ್ ಡಿಕ್ಕಿ; 18ಸಾವು
ಬೆಂಗಳೂರು : ಬಳ್ಳಾರಿ ಜಿಲ್ಲೆಯ ಆಲೂರು ಕ್ರಾಸ್ ಬಳಿ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ(ಕೆಎಸ್‌ಆರ್‌ಟಿಸಿ) ಬಸ್ ಹಾಗೂ ಲಾರಿಯ ನಡುವೆ, ಶುಕ್ರವಾರ ಮುಂಜಾನೆ ಭೀಕರ ಅಪಘಾತ ಸಂಭವಿಸಿದೆ.
ಮದುವೆ ದಿಬ್ಬಣ ಮುಗಿಸಿ ಮನೆಗೆ ಲಾರಿಯಲ್ಲಿ ಹಿಂದಿರುಗುತ್ತಿದ್ದಾಗ, ಜನ ಮಸಣದ ಹಾದಿ ಹಿಡಿದಿದ್ದಾರೆ. ಲಾರಿಯಲ್ಲಿದ್ದ 18 ಜನ ಆಪಘಾತ ನಡೆದ ಸ್ಥಳದಲ್ಲೇ ಸಾವನ್ನಪ್ಪಿದ್ದು, 12ಕ್ಕೂ ಅಧಿಕ ಜನ ತೀವ್ರವಾಗಿ ಗಾಯಗೊಂಡಿದ್ದಾರೆ.
ಗಾಯಗೊಂಡವರನ್ನು ದಾವಣಗೆರೆ ಹಾಗೂ ಚಿತ್ರದುರ್ಗದ ಆಸ್ಪತ್ರೆಗಳಿಗೆ ಸೇರಿಸಲಾಗಿದ್ದು, ಅವರಲ್ಲಿ 5 ಜನರ ಸ್ಥಿತಿ ಚಿಂತಾಜನಕವಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
(ಏಜನ್ಸೀಸ್)












Click it and Unblock the Notifications