ಗ್ರಾಮ ಪಂಚಾಯ್ತಿಗಳಿಗೆ ಕುಮಾರಣ್ಣನ ಎಚ್ಚರಿಕೆ ಏನ್ಗೊತ್ತೇ?
ಬೀದರ್ : ಗೃಹಯೋಜನೆಗಳಿಗೆ ಫಲಾನುಭವಿಗಳನ್ನು ಆಯ್ಕೆ ಮಾಡುವ ನಿಟ್ಟಿನಲ್ಲಿ, ಗ್ರಾಮ ಪಂಚಾಯ್ತಿಗಳು ಗ್ರಾಮಸಭೆ ನಡೆಸಲು ನಿರ್ಲಕ್ಷ್ಯ ವಹಿಸಿದರೆ ಗಂಭೀರ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡುತ್ತಿದ್ದ ಅವರು, ಆಶ್ರಯ, ಅಂಬೇಡ್ಕರ್, ಇಂದಿರಾ ಆವಾಸ್ ಯೋಜನೆ, ಮೊದಲಾದ ಗೃಹ ಯೋಜನೆಗಳಿಗೆ ಸಂಬಂಧಪಟ್ಟಂತೆ ಜಿಲ್ಲೆಯಲ್ಲಿ ಹೆಚ್ಚಿನ ಬೆಳವಣಿಗೆಯಾಗಿಲ್ಲ. ಕಳೆದ ಮೂರು ತಿಂಗಳಿಂದ ಕೇವಲ ಶೇಕಡಾ 15ರಷ್ಟು ಪ್ರಗತಿಯಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಈ ನಿಟ್ಟಿನಲ್ಲಿ ಗ್ರಾಮಸಭೆಗಳನ್ನು ನಡೆಸಲು ನಿರ್ಲಕ್ಷ್ಯ ತಾಳುವ ಗ್ರಾಮ ಪಂಚಾಯ್ತಿಗಳ ವಿರುದ್ಧ ತಕ್ಷಣವೇ ಕಠಿಣ ಕ್ರಮಕೈಗೊಳ್ಳಬೇಕಾಗುತ್ತದೆ. ಇಂತಹ ಗ್ರಾಮ ಪಂಚಾಯ್ತಿಗಳನ್ನು ಸೂಪರ್‌ಸೀಡ್ ಕೂಡ ಮಾಡಬೇಕಾದೀತು ಎಂದು ಎಚ್ಚರಿಕೆ ನೀಡಿದರು.
ಮುಂದಿನ 15ದಿನಗಳಲ್ಲಿ ಗ್ರಾಮಸಭೆಗಳನ್ನು ನಡೆಸಿ, ಫಲಾನುಭವಿಗಳನ್ನು ಆಯ್ಕೆ ಮಾಡುವ ಪ್ರಕ್ರಿಯೆ ಪೂರ್ಣಗೊಳಿಸಿ ಎಂದು ಅವರು ಪಂಚಾಯ್ತಿಗಳಿಗೆ ಸೂಚನೆ ನೀಡಿದರು.
(ಯುಎನ್‌ಐ)












Click it and Unblock the Notifications