• search
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಯಡಿಯೂರಪ್ಪಗೆ ಮುಖ್ಯಮಂತ್ರಿ ಕುರ್ಚಿ ದಕ್ಕದೇ...?

By Super
|
Yediyurappa
ಬೆಂಗಳೂರು : 'ಜೆಡಿಎಸ್‌ ಬಿಜೆಪಿಗೆ ಅಧಿಕಾರ ಹಸ್ತಾಂತರ ಮಾಡುವುದಿಲ್ಲ. ಬದಲಿಗೆ ಕುಮಾರಸ್ವಾಮಿ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ" ಎಂಬ ಕಾರ್ಮಿಕ ಸಚಿವ ಇಕ್ಬಾಲ್‌ ಅನ್ಸಾರಿ ಹೇಳಿಕೆ ರಾಜಕೀಯ ವಲಯದಲ್ಲಿ ಹಲವು ಊಹಾಪೋಹಗಳನ್ನು ಹುಟ್ಟುಹಾಕಿದೆ.

ಈ ಸುದ್ದಿಗೆ ಹೆಚ್ಚಿನ ಮಹತ್ವ ಕೊಡಬೇಕಾಗಿಲ್ಲ. ಅನ್ಸಾರಿ ನನ್ನ ಮೇಲಿರುವ ಪ್ರೀತಿಯಿಂದ ಹೀಗೆ ಮಾತಾಡಿದ್ದಾರೆ. ಬಿಜೆಪಿಗೆ ಅಧಿಕಾರ ಬಿಟ್ಟುಕೊಡುವುದರಲ್ಲಿ ಯಾವುದೇ ಗೊಂದಲವಿಲ್ಲ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದು, ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಕೂಡ ಇದೇ ರೀತಿಯಲ್ಲಿ ಪ್ರತಿಕ್ರಿಯಿಸಿದ್ದಾರೆ.

ಆದರೆ ತಮ್ಮ ಹೇಳಿಕೆ ಸಮರ್ಥಿಸಿಕೊಂಡಿರುವ ಅನ್ಸಾರಿ, 30ಜನ ಬಿಜೆಪಿ ಶಾಸಕರು ಜೆಡಿಎಸ್‌ ಪರವಾಗಿದ್ದಾರೆ. ಮೈತ್ರಿ ಸರ್ಕಾರ ಮುಂದುವರಿಯಲಿದೆ. ಆದರೆ ಕುಮಾರಸ್ವಾಮಿಯವರೇ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ. ಮುಂದಿನ ಬೆಳವಣಿಗೆ ಬಗ್ಗೆ ನಾನು ಬರೀ ಸುಳಿವು ನೀಡಿದ್ದೇನೆ. ಕೆಲವು ತಿಂಗಳಲ್ಲಿ ಸ್ಪಷ್ಟ ಚಿತ್ರ ದೊರೆಯಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಬಿಜೆಪಿಯಲ್ಲಿ ತಳಮಳ : ಸಚಿವ ಅನ್ಸಾರಿ ಹೇಳಿಕೆ ಬಿಜೆಪಿಯಲ್ಲಿ ತಳಮಳ ಉಂಟುಮಾಡುವುದರ ಜೊತೆಗೆ ರಾಜಕೀಯ ಪಕ್ಷಗಳಲ್ಲಿ ಚರ್ಚೆಗೆ ಗ್ರಾಸವಾಗಿದೆ.

ಅನ್ಸಾರಿ ಯಾವ ಕಾರಣಕ್ಕೆ ಈ ರೀತಿ ಹೇಳಿಕೆ ನೀಡುತ್ತಿದ್ದಾರೋ ಗೊತ್ತಿಲ್ಲ. ನನ್ನ ಹಣೆಬರಹ ಹೇಗಿದೆಯೋ ಆ ರೀತಿ ಆಗುತ್ತದೆ. ಕುಮಾರಸ್ವಾಮಿ ಅಧಿಕಾರ ಹಸ್ತಾಂತರಿಸುತ್ತಾರೆ ಎಂಬ ವಿಶ್ವಾಸ ನನಗಿದೆ ಎಂದು ಉಪಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಡಿ.ವಿ.ಸದಾನಂದಗೌಡ ಮಾತನಾಡಿ, ಬಿಜೆಪಿ ಶಾಸಕರು ಯಡಿಯೂರಪ್ಪ ಅವರ ಜೊತೆಗಿದ್ದಾರೆ. ಅನ್ಸಾರಿ, ಜೆಡಿಎಸ್‌ ಜೊತೆಗಿರುವ 30 ಬಿಜೆಪಿ ಶಾಸಕರ ಪಟ್ಟಿ ಕೊಡಲಿ. ಆದರೆ ಅವರು ದೋಸ್ತಿ ಒಡೆಯುವ ಕೆಲಸಕ್ಕೆ ಯತ್ನಿಸಬಾರದು. ಸಚಿವರಾಗಿ ಇಂತಹ ಹೇಳಿಕೆಗಳು ಅವರಿಗೆ ಶೋಭೆ ತರುವುದಿಲ್ಲ ಎಂದು ಪ್ರತಿಕ್ರಿಸಿದ್ದಾರೆ.

ಅನ್ಸಾರಿ ಹೇಳಿಕೆಗೆ ತುಪ್ಪ ಸುರಿದ ಕುಮಾರಸ್ವಾಮಿ ...!?: ಚಾಮರಾಜನಗರ ಜಿಲ್ಲೆ ಭೇಟಿ ಸಂದರ್ಭದಲ್ಲಿ ಜನರನ್ನುದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ಕುಮಾರಸ್ವಾಮಿ, ನಿಮ್ಮ ಆಶೀರ್ವಾದವಿದ್ದರೆ ನಾನು ಅಧಿಕಾರ ಕಳೆದುಕೊಳ್ಳುವುದಿಲ್ಲ. ಅಧಿಕಾರದಲ್ಲಿ ಮುಂದುವರಿಯಬೇಕು ಎಂದು ನನ್ನ ಹಣೆಯಲ್ಲಿ ಬರೆದಿದ್ದರೆ ಯಾರಿಂದಲೂ ತಪ್ಪಿಸಲು ಸಾಧ್ಯವಿಲ್ಲ. ಇಲ್ಲಿಗೆ ಬಂದವರು ಅಧಿಕಾರ ಕಳೆದುಕೊಳ್ಳುವುದಿಲ್ಲ. ಇದು ಅದೃಷ್ಟವಂತ ಜಿಲ್ಲೆ ಎಂದು ಮುಂದೆ ಇತಿಹಾಸಕಾರರು ಬರೆಯಬೇಕಾಗುತ್ತದೆ ಎಂದು ಹೇಳಿದ್ದಾರೆ.

ಆನಂತರ ಈ ಹೇಳಿಕೆಗೆ ಸಮಜಾಯಿಷಿ ನೀಡಿದ ಕುಮಾರಸ್ವಾಮಿ, ದೋಸ್ತಿ ಸರ್ಕಾರ ಅಧಿಕಾರದಲ್ಲಿ ಮುಂದುವರಿದರೆ ನಾವೇ ಅಧಿಕಾರದಲ್ಲಿ ಮುಂದುವರಿದಂತೆ ಅಲ್ಲವೇ ಎಂದು ಮಾತು ತಿರುಗಿಸಿದರು.

ಸಿದ್ಧರಾಮಯ್ಯ ಭವಿಷ್ಯ ನುಡಿದಿದ್ದರೇ...? : ಕೇವಲ ಒಂದು ವಾರದ ಹಿಂದಷ್ಟೇ ಮಾಜಿ ಉಪಮುಖ್ಯಮಂತ್ರಿ-ಕಾಂಗ್ರೆಸ್‌ ನಾಯಕ ಸಿದ್ಧರಾಮಯ್ಯ ಮಾತನಾಡುತ್ತಾ, ಜೆಡಿಎಸ್‌ ಬಿಜೆಪಿಗೆ ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಡುವುದಿಲ್ಲ. ಯಡಿಯೂರಪ್ಪ ಮುಖ್ಯಮಂತ್ರಿಯಾಗಲಾರರು. ಕುಮಾರಸ್ವಾಮಿ ಮುಖ್ಯಮಂತ್ರಿಯಾದರೆ ಮಾತ್ರ ದೋಸ್ತಿ ಸರ್ಕಾರ ಮುಂದುವರಿಯುತ್ತದೆ ಎಂದು ಹೇಳಿದ್ದರು.

ಆನಂತರ ಹೊರಬಿದ್ದ ಸಚಿವ ಅನ್ಸಾರಿ ಹೇಳಿಕೆ, ಸಿದ್ಧರಾಮಯ್ಯ ಹೇಳಿಕೆಗೆ ಪುಷ್ಟಿ ನೀಡಿದಂತಾಗಿದೆ.(ದಟ್ಸ್‌ ಕನ್ನಡ ವಾರ್ತೆ)

ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Will Yediyurappa become CM of Karnataka…?

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

Notification Settings X
Time Settings
Done
Clear Notification X
Do you want to clear all the notifications from your inbox?
Settings X
X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more