ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಜ್ಯ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಶೇ.12.25ಕ್ಕೆ ಏರಿಕೆ

By Staff
|
Google Oneindia Kannada News

ಬೆಂಗಳೂರು: ರಾಜ್ಯಸರ್ಕಾರಿ ನೌಕರ ತುಟ್ಟಿ ಭತ್ಯೆ ದರವನ್ನು ಮೂಲ ವೇತನದ ಶೇ 7 ರಿಂದ ಶೇ 12.25ಕ್ಕೆ ಹೆಚ್ಚಿಸಿ, ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಜನವರಿ 1ರಿಂದ ಪೂರ್ವನ್ವಯ ಆಗುವಂತೆ ಸರ್ಕಾರದ ಮತ್ತು ಜಿಲ್ಲಾ ಪಂಚಾಯತ್‌ಗಳ ಪೂರ್ಣಾವಧಿ ನೌಕರರಿಗೆ, ಕಾಲಿಕ ವೇತನ ಶ್ರೇಣಿಗಳಲ್ಲಿರುವ ಪೂರ್ಣಾವಧಿ ವರ್ಕ್‌ ಚಾರ್ಚ್‌ ನೌಕರರಿಗೆ ಹಾಗೂ ಸರ್ಕಾರದಿಂದ ಅನುದಾನ ಪಡೆಯುತ್ತಿರುವ ಶಿಕ್ಷಣ ಸಂಸ್ಥೆ ಮತ್ತು ವಿಶ್ವವಿದ್ಯಾಲಯಗಳಲ್ಲಿ ಕಾಲಿಕ ವೇತನ ಶ್ರೇಣಿಗಳಲ್ಲಿರುವ ಪೂರ್ಣಾವಧಿ ನೌಕರರಿಗೆ ಈ ಆದೇಶ ಅನ್ವಯಿಸುತ್ತದೆ.

ಉಳಿದಂತೆ, ಎಫ್‌ಎನ್‌ಜೆಪಿಸಿ ವೇತನ ಶ್ರೇಣಿಗಳಲ್ಲಿರುವ ನ್ಯಾಯಾಂಗ ಅಧಿಕಾರಿಗಳು ಹಾಗೂ ಯುಜಿಸಿ/ಎಐಸಿಟಿಇ/ಐಸಿಎಆರ್‌ ವೇತನ ಶ್ರೇಣಿಯಲ್ಲಿರುವ ಬೋಧಕ ಸಿಬ್ಬಂದಿ, ಗ್ರಂಥಪಾಲಕರು ಮತ್ತು ದೈಹಿಕ ಸಿಬ್ಬಂದಿಗಳು ಈ ಪ್ರಯೋಜನ ಪಡೆಯಲಿದ್ದಾರೆ ಎಂದು ಆರ್ಥಿಕ ಇಲಾಖೆ ಉಪಕಾರ್ಯದರ್ಶಿ ಎನ್‌.ಟಿ. ನಾಯ್ಕ್‌ ಸುದ್ದಿಗಾರರಿಗೆ ತಿಳಿಸಿದ್ದಾರೆ.

(ಏಜನ್ಸೀಸ್‌)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X