ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಜೂನ್‌ ಅಂತ್ಯದಲ್ಲಿ ಹೈಸ್ಕೂಲ್‌ ವಿದ್ಯಾರ್ಥಿಗಳಿಗೆ ಬಿಸಿಯೂಟ

By Staff
|
Google Oneindia Kannada News

ಬೆಂಗಳೂರು : ರಾಜ್ಯಾದ್ಯಂತ ಪ್ರೌಢಶಾಲೆಗಳಲ್ಲಿ ಜೂನ್‌ 1ರಿಂದ ಆರಂಭವಾಗಬೇಕಿದ್ದ ಮಧ್ಯಾಹ್ನದ ಬಿಸಿಯೂಟ ಯೋಜನೆ, ಜೂನ್‌ ಅಂತ್ಯದಲ್ಲಿ ಆರಂಭವಾಗಲಿದೆ.

ಬಿಸಿಯೂಟ ಯೋಜನೆಯನ್ನು ಪ್ರೌಢಶಾಲೆಗಳಿಗೂ ವಿಸ್ತರಿಸಿ, ಜೂನ್‌ 1ರಿಂದಲೇ ಯೋಜನೆ ಜಾರಿಯಾಗಬೇಕೆಂದು ಸರ್ಕಾರ ಮೇ 19ರಂದು ಆದೇಶ ಹೊರಡಿಸಿತ್ತು. ಶಿಕ್ಷಣ ಇಲಾಖೆ ಯೋಜನೆ ಜಾರಿಗೊಳಿಸಲು ಇನ್ನೂ ತಯಾರಿ ನಡೆಸುತ್ತಿದ್ದು, ಅಡುಗೆ ಭಟ್ಟರ ನೇಮಕಾತಿ ಹಾಗೂ ಪಾತ್ರೆಗಳ ಖರೀದಿಯಲ್ಲಿ ತೊಡಗಿದೆ. ಹಾಗಾಗಿ ಯೋಜನೆ ಜಾರಿಯಾಗುವುದು ವಿಳಂಬವಾಗಿದೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಶಿಕ್ಷಣ ಕಾರ್ಯದರ್ಶಿ ತ.ಮ.ವಿಜಯಭಾಸ್ಕರ್‌, ಜೂನ್‌ ಅಂತ್ಯದಲ್ಲಿ ಯೋಜನೆ ಜಾರಿಯಾಗಲಿದೆ. ಈ ನಿಟ್ಟಿನಲ್ಲಿ ಎಲ್ಲ ಜಿಲ್ಲೆಗಳ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರಿಗೆ ನಿರ್ದೇಶನ ನೀಡಲಾಗಿದೆ ಎಂದು ಸ್ಪಷ್ಟಪಡಿಸಿದರು.

300ಕ್ಕಿಂತ ಕಡಿಮೆ ಸಂಖ್ಯೆಯ ವಿದ್ಯಾರ್ಥಿಗಳನ್ನು ಹೊಂದಿರುವ ಪ್ರೌಢಶಾಲೆಗಳು ಈ ಯೋಜನೆ ವ್ಯಾಪ್ತಿಗೆ ಬರುತ್ತವೆ. 3,574 ಸರ್ಕಾರಿ ಪ್ರೌಢಶಾಲೆಗಳು ಹಾಗೂ 2,800 ಅನುದಾನಿತ ಪ್ರೌಢಶಾಲೆಗಳ ಒಟ್ಟು 18.35ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಯೋಜನೆಯ ಸೌಲಭ್ಯ ಪಡೆಯಲಿದ್ದಾರೆ.

(ದಟ್ಸ್‌ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X