ರಾಷ್ಟ್ರಗೀತೆವಿವಾದ: ಹೈಕೋರ್ಟ್‌ಗೆ ನಾರಾಯಣಮೂರ್ತಿ

ಬೆಂಗಳೂರು : ರಾಷ್ಟ್ರಗೀತೆ ವಿವಾದಕ್ಕೆ ಸಂಬಂಧಿಸಿದಂತೆ ಇನ್ಫೋಸಿಸ್‌ ನಾರಾಯಣಮೂರ್ತಿ, ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ.

ತಮ್ಮ ವಿರುದ್ಧ ಸೆಷನ್ಸ್‌ ಕೋರ್ಟ್‌ ಹೊರಡಿಸಿರುವ ಆದೇಶವನ್ನು, ಅವರು ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ಹೈಕೋರ್ಟ್‌ನಲ್ಲಿ ಈ ಸಂಬಂಧದ ವಿಚಾರಣೆ ನಡೆಯಲಿದೆ.

ಹಿನ್ನೆಲೆ : ರಾಷ್ಟ್ರಗೀತೆಗೆ ಅವಮಾನ ಮಾಡಿದ್ದಾರೆಂದು ನಾರಾಯಣಮೂರ್ತಿ ವಿರುದ್ಧ, ಕೆಲವರು ಸೆಷನ್ಸ್‌ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ನಾರಾಯಣಮೂರ್ತಿ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ದಾಖಲಿಸುವಂತೆ ಅರ್ಜಿಯಲ್ಲಿ ಒತ್ತಾಯಿಸಲಾಗಿತ್ತು.

ಅರ್ಜಿಯನ್ನು ವಿಚಾರಣೆಗೆತ್ತಿಕೊಂಡ ನ್ಯಾಯಾಲಯ, ಜೂ.21ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ, ನಾರಾಯಣಮೂರ್ತಿ ಅವರಿಗೆ ಆದೇಶ ನೀಡಿತ್ತು. ಈ ಆದೇಶ ಪ್ರಶ್ನಿಸಿ ಹೈಕೋರ್ಟ್‌ ಮುಂದೆ ನಾರಾಯಣಮೂರ್ತಿ ನಿಂತಿದ್ದಾರೆ.

(ದಟ್ಸ್‌ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+