ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಇನ್ನೂ 28 ಪ್ರಥಮ ದರ್ಜೆ ಕಾಲೇಜುಗಳು ಮಂಜೂರು

By Staff
|
Google Oneindia Kannada News

ಬೆಂಗಳೂರು : ಪ್ರಸಕ್ತ ವರ್ಷ ಈಗಾಗಲೇ 104 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ ಮಂಜೂರಾತಿ ನೀಡಲಾಗಿದ್ದು, ಬೇಡಿಕೆ ಹಿನ್ನೆಲೆಯಲ್ಲಿ ಇನ್ನೂ 28 ಕಾಲೇಜುಗಳಿಗೆ ಮಂಜೂರಾತಿ ನೀಡಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಿ.ಎಚ್‌.ಶಂಕರಮೂರ್ತಿ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಅವರು, ಈ ಮೊದಲು 104 ಕಾಲೇಜುಗಳ ಆರಂಭಕ್ಕೆ ಆದೇಶ ಹೊರಡಿಸಲಾಗಿತ್ತು. ಇನ್ನೂ 28 ಕಾಲೇಜುಗಳ ಆರಂಭಕ್ಕೆ ಸಂಬಂಧಿಸಿದಂತೆ, ಒಂದೆರಡು ದಿನಗಳಲ್ಲಿ ಆದೇಶ ಹೊರಡಿಸಲಾಗುವುದು. ಹೊಸ ಕಾಲೇಜುಗಳ ಕಟ್ಟಡಕ್ಕಾಗಿ, ತಲಾ ಒಂದು ಕೋಟಿ ರೂಪಾಯಿಯಂತೆ ಒಟ್ಟು 134 ಕೋಟಿ ರೂಪಾಯಿ ಮೀಸಲಿಡಲಾಗಿದೆ ಎಂದು ಅವರು ತಿಳಿಸಿದರು.

ಹೊಸ ಕಾಲೇಜುಗಳಿಗೆ ಪ್ರಾಂಶುಪಾಲರ ನೇಮಕ ಪೂರ್ಣಗೊಂಡಿದೆ. ಈ ನಿಟ್ಟಿನಲ್ಲಿ ರಾಜ್ಯ ಲೋಕಸೇವಾ ಆಯೋಗದ ಮೂಲಕ, ಶೀಘ್ರದಲ್ಲೇ 1,600 ಉಪನ್ಯಾಸಕರ ನೇಮಕಾತಿ ಮಾಡಿಕೊಳ್ಳಲಾಗುವುದು. ಸದ್ಯದಲ್ಲೇ ಈ ಕುರಿತು ಅಧಿಸೂಚನೆ ಹೊರಡಿಸಲಾಗುವುದು ಎಂದು ಶಂಕರಮೂರ್ತಿ ವಿವರಿಸಿದರು.

(ದಟ್ಸ್‌ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X