• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಸೋನಿಯಾ ನಿಷ್ಠ ರಾಷ್ಟ್ರಪತಿ ಅಭ್ಯರ್ಥಿಗೆ ವಿರೋಧ :ಬಿಜೆಪಿ

By Staff
|


ಬೆಂಗಳೂರು : ಕಾಂಗ್ರೆಸ್ ಪಕ್ಷವು, ಸೋನಿಯಾ ನಿಷ್ಠರನ್ನು ರಾಷ್ಟ್ರಪತಿ ಅಭ್ಯರ್ಥಿ ಮಾಡಲು ಹುಡುಕಾಟ ನಡೆಸಿದೆ.ಆದರೆ ಬಿಜೆಪಿ ರಾಷ್ಟ್ರನಿಷ್ಠ ಅಭ್ಯರ್ಥಿಗಾಗಿ ಹುಡುಕಾಟ ನಡೆಸಿದೆ ಎಂದು ಬಿಜೆಪಿ ಉಪಾಧ್ಯಕ್ಷ ಮುಖ್ತಾರ್ ಅಬ್ಬಾಸ್ ನಕ್ವಿ,ಹೇಳಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡುತ್ತಿದ್ದ ಅವರು, ಕಾಂಗ್ರೆಸ್ ಯಾವತ್ತೂ ಒಮ್ಮತದ ಅಭ್ಯರ್ಥಿ ಆಯ್ಕೆ ಮಾಡಲು ಪ್ರಯತ್ನಿಸಿಲ್ಲ. ಮೊನ್ನೆಯಷ್ಟೇ ಪ್ರಧಾನಿ ಮನಮೋಹನ್‌ಸಿಂಗ್, ಕಾಂಗ್ರೆಸ್ ಆಯ್ಕೆ ಮಾಡುವ ಅಭ್ಯರ್ಥಿಗೆ ಬೆಂಬಲ ನೀಡಬೇಕೆಂದು ಕೇಳಿಕೊಂಡಿದ್ದಾರೆ.ಈ ವಿಚಾರದಲ್ಲಿ ಮನಮೋಹನ್‌ಸಿಂಗ್‌ರ ನಡೆವಳಿಕೆ ಇತರ ಪಕ್ಷಗಳ ಮೇಲೆ ಆದೇಶ ಹೊರಡಿಸಿದಂತಿದೆ ಎಂದರು.

ಕಳೆದ ಬಾರಿ ರಾಷ್ಟ್ರಪತಿ ಚುನಾವಣೆ ಸಂದರ್ಭದಲ್ಲಿ, ಡಾ.ಎ.ಪಿ.ಜೆ.ಅಬ್ದುಲ್‌ ಕಲಾಂ ಅವರನ್ನು ಆಯ್ಕೆ ಮಾಡುವ ಮೊದಲು ಎನ್‌‌ಡಿಎ , ಎಲ್ಲ ಪಕ್ಷಗಳೊಂದಿಗೂ ಸಮಾಲೋಚನೆ ನಡೆಸಿತ್ತು. ಈ ಬಾರಿ ಕಾಂಗ್ರೆಸ್ ಸರ್ವಸಮ್ಮತ ಅಭ್ಯರ್ಥಿ ಆಯ್ಕೆ ಮಾಡುವ ನಿಟ್ಟಿನಲ್ಲಿ ವಿರೋಧ ಪಕ್ಷದೊಂದಿಗೆ ಮಾತನಾಡದೆ, ತನ್ನದೇ ಸ್ವಂತ ನಿರ್ಧಾರ ಕೈಗೊಂಡಿದೆ. ಈ ನಡತೆಯೊಂದಿಗೆ ಕಾಂಗ್ರೆಸ್‌ನ ಬಣ್ಣ ಸಂಪೂರ್ಣ ಬಯಲಾಗಿದೆ ಎಂದು ಅವರು ಖಂಡಿಸಿದರು.

ರಾಷ್ಟ್ರಪತಿ ಚುನಾವಣೆಗೆ ತನ್ನ ಅಭ್ಯರ್ಥಿ ಆಯ್ಕೆ ಅಂತಿಮಗೊಳಿಸುವ ನಿಟ್ಟಿನಲ್ಲಿ, ಎನ್‌ಡಿಎ ನಾಯಕರು ಬುಧವಾರ ನವದೆಹಲಿಯಲ್ಲಿ ಸಭೆ ನಡೆಸಲಿದ್ದಾರೆ ಎಂದು ಮುಖ್ತಾರ್ ಅಬ್ಬಾಸ್ ನಕ್ವಿ,ಹೇಳಿದರು.

ಯುಪಿಎಗೆ ಬಿಎಸ್‌ಪಿ ಬೆಂಬಲ : ರಾಷ್ಟ್ರಪತಿ ಚುನಾವಣೆಯಲ್ಲಿ ಬಹುಜನ ಸಮಾಜ ಪಕ್ಷ ಯುಪಿಎ ಅಭ್ಯರ್ಥಿಗೆ ಬೆಂಬಲ ನೀಡಲಿದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಹಾಗೂ ಬಿಎಸ್‌ಪಿ ಅಧಿನಾಯಕಿ ಮಾಯಾವತಿ ಹೇಳಿದ್ದಾರೆ.

ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಕುರಿತು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರೊಂದಿಗೆ ಮಾತನಾಡಿದ್ದೇನೆ. ಯುಪಿಎ ಅಭ್ಯರ್ಥಿ ಆಯ್ಕೆ ಸಂಬಂಧ ಒಮ್ಮತಕ್ಕೆ ಬರಲಾಗಿದೆ.ಸದ್ಯದಲ್ಲೇ ಸೋನಿಯಾ ಅಭ್ಯರ್ಥಿ ಹೆಸರು ಘೋಷಿಸಲಿದ್ದಾರೆ ಎಂದು ಅವರು ಸ್ಪಷ್ಟಪಡಿಸಿದರು.

(ಏಜನ್ಸೀಸ್)

ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more