For Daily Alerts
ಮೈಸೂರಿನಲ್ಲಿ ಗುಂಪು ಘರ್ಷಣೆ : ನಿಷೇಧಾಜ್ಞೆ ಜಾರಿ
ಮೈಸೂರು, ಜುಲೈ 15 : ನಗರದಲ್ಲಿ ಭಾನುವಾರಎರಡು ಗುಂಪುಗಳ ನಡುವೆ ಘರ್ಷಣೆಯುಂಟಾದ ಪರಿಣಾಮ, ಐದು ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಮಾಡಲಾಗಿದೆ.
ಕಳೆದ ರಾತ್ರಿ ಎನ್.ಆರ್.ಮೊಹಲ್ಲಾದಲ್ಲಿರುವ ಪ್ರಾರ್ಥನಾ ಮಂದಿರವೊಂದನ್ನುಹಾಳುಗೆಡವಿದ ಹಿನ್ನೆಲೆಯಲ್ಲಿ, ಘರ್ಷಣೆ ಸಂಭವಿಸಿದೆ ಎಂದು ಪೊಲೀಸ್ ಮೂಲಗಳು ಹೇಳಿವೆ.
ನಗರ ಪೊಲೀಸ್ ಆಯುಕ್ತ ಭಾಸ್ಕರ್ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಸ್ಥಳದಲ್ಲಿ ಹೆಚ್ಚುವರಿ ಪೊಲೀಸ್ ತುಕಡಿಯನ್ನು ನಿಯೋಜಿಸಲಾಗಿದೆ.ಘಟನೆಗೆ ಸಂಬಂಧಿಸಿದಂತೆ ಆರು ಜನರನ್ನು ಬಂಧಿಸಲಾಗಿದ್ದು,ತನಿಖೆ ಮುಂದುವರಿದಿದೆ. ಸದ್ಯಕ್ಕೆ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಭಾಸ್ಕರ್ ತಿಳಿಸಿದ್ದಾರೆ.
(ಯುಎನ್ಐ)