ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಿಜೆಪಿ,ಜೆಡಿಎಸ್ ಮೈತ್ರಿ ಸುತ್ತ ನೂರೊಂದು ವದಂತಿಗಳು!

By Staff
|
Google Oneindia Kannada News

ಬೆಂಗಳೂರು : ರಾಷ್ಟ್ರಪತಿ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಶೇಖಾವತ್‌ರನ್ನು ಬೆಂಬಲಿಸದ ಜೆಡಿಎಸ್ ಬಗ್ಗೆ ಬಿಜೆಪಿ ರಾಷ್ಟ್ರೀಯ ನಾಯಕರು ಸಿಡಿಮಿಡಿಕೊಂಡು, ಯಡಿಯೂರಪ್ಪ ಅವರಿಗೆ ಜೆಡಿಎಸ್ ಮೈತ್ರಿ ಮುರಿದುಕೊಳ್ಳಲು ಸೂಚನೆ ನೀಡಿದ್ದಾರೆ ಎಂಬ ವದಂತಿ ಎಲ್ಲೆಡೆ ಕೇಳಿ ಬರುತ್ತಿದೆ.

ಗುರುವಾರ ಈ ಬಗ್ಗೆ ಪ್ರತಿಕ್ರಿಯಿಸಿರುವ ಉಪಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಜೆಡಿಎಸ್ ಜೊತೆ ಮೈತ್ರಿ ಮುರಿದುಕೊಳ್ಳಲು ಬಿಜೆಪಿ ಹೈಕಮಾಂಡ್ ಸೂಚನೆ ನೀಡಿಲ್ಲ. ದೋಸ್ತಿ ಸರ್ಕಾರ ಪೂರ್ಣಾವಧಿ ಪೂರೈಸಲಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.

ಇದೆಲ್ಲವೂ ಸುಳ್ಳು . ಇವು ಕೇವಲ ವದಂತಿಗಳು. ಅಧಿಕಾರ ಕೈತಪ್ಪಿದ ಸಂಕಟಕ್ಕೆ ಕಾಂಗ್ರೆಸ್ ಇಂತಹ ಸುದ್ದಿಗಳನ್ನು ಹಬ್ಬಿಸುತ್ತಿದೆ ಎಂದು ಪ್ರತಿಕ್ರಿಯಿಸಿದ್ದಾರೆ.

ಬಿಜೆಪಿಯಲ್ಲಿಯೇ ಅಡ್ಡಿ : ಪೂರ್ವ ಒಪ್ಪಂದದಂತೆ ಬಿಜೆಪಿಯ ಯಡಿಯೂರಪ್ಪ ಅವರಿಗೆ ಅಧಿಕಾರ ಹಸ್ತಾಂತರಿಸಲು ನಾನು ಸಿದ್ಧನಿದ್ದೇನೆ. ಆದರೆ ಯಡಿಯೂರಪ್ಪ ಮುಖ್ಯಮಂತ್ರಿಯಾಗಲು ಬಿಜೆಪಿಯವರೇ ಅಡ್ಡಿಪಡಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X