ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಿಗಿ ಭದ್ರತೆಯ ಚಪ್ಪರದಡಿ ಬುಧವಾರ ಸ್ವಾತಂತ್ರ್ಯ ದಿನಾಚರಣೆ

By Staff
|
Google Oneindia Kannada News

ಬೆಂಗಳೂರು, ಆಗಸ್ಟ್ 14 : 60ನೇ ಸ್ವಾತಂತ್ರ್ಯೋತ್ಸವ ಸಮಾರಂಭ ನಗರದಲ್ಲಿ ಹಿಂದೆಂದೂ ಕಾಣದ ಬಿಗಿ ಭದ್ರತೆಯಲ್ಲಿ ಬುಧವಾರ ಜರುಗಲಿದೆ.

ಭಯೋತ್ಪಾದಕ ಸಂಘಟನೆಗಳಿಂದ ಬಂದಿರುವ ಬೆದರಿಕೆಯ ಹಿನ್ನೆಲೆಯಲ್ಲಿ ಮಾಣೇಕ್ ಷಾ ಪರೇಡ್ ಮೈದಾನಕ್ಕೆ ಎಲ್ಲ ಮೂಲೆಗಳಿಂದ ಬಿಗಿ ಪಹರೆ ಒಡ್ಡಲಾಗಿದೆ. ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಂದ ಧ್ವಜಾರೋಹಣ, ಎನ್‌ಸಿಸಿ ಕೆಡೆಟ್‌ಗಳಿಂದ ಕವಾಯತು, ಚಿಣ್ಣರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಪರೇಡ್ ಮೈದಾನದಲ್ಲಿ ನಡೆಯಲಿವೆ. ಜೊತೆಗೆ ಸಾವಿರಾರು ಸಾರ್ವಜನಿಕರು ಸಾಂಸ್ಕೃತಿಕ ಕಾರ್ಯಕ್ರಮವನ್ನು ವೀಕ್ಷಿಸಲಿದ್ದಾರೆ.

ವರ್ಷಗಳ ಹಿಂದೆ ನಡೆದ ಐಐಎಸ್‌ಸಿ ಮೇಲಿನ ದಾಳಿಯಲ್ಲಿ ಅಲ್ ಖೈದಾ ಭಯೋತ್ಪಾದಕ ಸಂಘಟನೆಯ ಕೈವಾಡ, ಲಂಡನ್ ಗ್ಲಾಸ್ಗೋ ವಿಮಾನ ನಿಲ್ದಾಣದ ಮೇಲಿನ ದಾಳಿಯಲ್ಲಿ ಬೆಂಗಳೂರಿಗರಿಬ್ಬರು ತೊಡಗಿಕೊಂಡಿದ್ದರ ಹಿನ್ನೆಲೆಯಲ್ಲಿ ನಾಳೆಯ ಆಚರಣೆಗೆ ಮತ್ತು ಬಿಗಿ ಭದ್ರತೆಗೆ ಹೆಚ್ಚಿನ ಮಹತ್ವ ದೊರೆತಿದೆ.

ರಾಜ್ಯಪಾಲ ಟಿ.ಎನ್.ಚತುರ್ವೇದಿ, ಶಾಸಕರು, ಹಿರಿಯ ಪೊಲೀಸ್ ಅಧಿಕಾರಿಗಳು ಮತ್ತು ಸೇನಾಧಿಕಾರಿಗಳು ಸೇರಿದಂತೆ ಹಲವು ಗಣ್ಯರು ಮಾಣೇಕ್ ಷಾ ಪರೇಡ್ ಮೈದಾನದಲ್ಲಿ ಸ್ವಾತಂತ್ರ್ಯೋತ್ಸವವನ್ನು ವೀಕ್ಷಿಸಲಿದ್ದಾರೆ.

ಮೈದಾನದ ಎಲ್ಲ ಆಗಮನ ಮತ್ತು ನಿರ್ಗಮನ ಸ್ಥಳದಲ್ಲಿ ಹಾಗು ಸುತ್ತಲಿನ ಪ್ರದೇಶದಲ್ಲಿ ಜನರ ಮತ್ತು ವಾಹನಗಳ ಓಡಾಟದ ಮೇಲೆ ಹದ್ದಿನ ಕಣ್ಣನ್ನು ಇಡಲಾಗುವುದು ಎಂದು ಉನ್ನತ ಪೊಲೀಸ್ ಮೂಲಗಳು ತಿಳಿಸಿವೆ.

ಉಚ್ಚ ನ್ಯಾಯಾಲಯ, ವಿಧಾನಸೌಧ, ರಾಜಭವನ ಸೇರಿದಂತೆ ಪ್ರಮುಖ ಮಾಹಿತಿ ತಂತ್ರಜ್ಞಾನ ಸಂಸ್ಥೆಗಳಿಗೆ ಹೆಚ್ಚಿನ ಭದ್ರತೆ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಇದಲ್ಲದೆ ಮೈಸೂರು, ಹುಬ್ಬಳ್ಳಿ, ಗುಲಬರ್ಗಾ, ಮಂಗಳೂರು ಮತ್ತು ಬೆಳಗಾವಿಗಳಲ್ಲಿಯೂ ಸೂಕ್ಷ್ಮ ಪ್ರದೇಶಗಳಲ್ಲಿ ಬಿಗಿ ಭದ್ರತೆ ನೀಡಲಾಗಿದೆ.

(ಯುಎನ್ಐ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X