ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

69ಸಾವಿರ ಕೋಟಿ! ದೋಸ್ತಿ ಸರ್ಕಾರದ ಮಹತ್ವದ ಹೆಜ್ಜೆ!

By Staff
|
Google Oneindia Kannada News

ಬೆಂಗಳೂರು, ಆಗಸ್ಟ್ 28 : ಮುಖ್ಯಮಂತ್ರಿ ನೇತೃತ್ವದ ಉನ್ನತ ಮಟ್ಟದ ಸಮಿತಿ 69,150ಕೋಟಿ ವೆಚ್ಚದ 59 ಹೊಸ ಯೋಜನೆಗಳಿಗೆ ಮಂಗಳವಾರ ಅನುಮೋದನೆ ನೀಡಿದೆ.

6.78 ಲಕ್ಷ ಮಂದಿಗೆ ಉದ್ಯೋಗ ಕಲ್ಪಿಸಲು ನೆರವಾಗುವ ಈ ಯೋಜನೆಗಳಿಗೆ ಅನುಮೋದನೆ ಸಿಕ್ಕಿದ ವಿಚಾರವನ್ನು ರಾಜ್ಯ ಬೃಹತ್ ಮತ್ತು ಮಧ್ಯಮ ಪ್ರಮಾಣದ ಕೈಗಾರಿಕೆ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಸುದ್ದಿಗಾರರಿಗೆ ತಿಳಿಸಿದ್ದಾರೆ.

ನಾಲ್ಕು ವಿದ್ಯುತ್ ಯೋಜನೆಗಳು, ಹದಿನಾರು ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಂಬಂಧಿ ಯೋಜನೆಗಳು ಈ ಪಟ್ಟಿಯಲ್ಲಿವೆ. ಸಕ್ಕರೆ, ಉಕ್ಕು, ಪ್ರವಾಸ, ತಂತ್ರಾಂಶ ಅಭಿವೃದ್ಧಿ,ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ರಾಸಾಯನಿಕ ಕೈಗಾರಿಕೆ ಸೇರಿದಂತೆ ವಿವಿಧ ವಿಭಾಗಗಳನ್ನು ಈ ಯೋಜನೆಗಳು ಪ್ರತಿನಿಧಿಸಿವೆ

ಹೊಸ ಯೋಜನೆಗಳ ಪಟ್ಟಿಯಲ್ಲಿ ಎಲೆಕ್ಟ್ರಾನಿಕ್ ಹಾರ್ಡ್ ವೇರ್ ತಂತ್ರಜ್ಞಾನ ವಿಶೇಷ ಆರ್ಥಿಕ ವಲಯ(ಮಂಗಳೂರು)ಸಹಾ ಒಂದಾಗಿದೆ ಎಂದು ಕಟ್ಟಾ ಸುಬ್ರಹ್ಮಣ್ಯ ಹೇಳಿದ್ದಾರೆ.

(ಯುಎನ್ಐ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X