ಭಾರತದ ಧರೆಗಿಳಿದ ಗಗನಯಾನಿ ಸುನೀತಾ ವಿಲಿಯಮ್ಸ್

Sunita Williams arrives in Ahmedabadಅಹ್ಮದಾಬಾದ್, ಸೆಪ್ಟೆಂಬರ್ 20 : ಬಾಹ್ಯಾಕಾಶದಲ್ಲಿ ಅತಿಹೆಚ್ಚು ದಿನ ಉಳಿದ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಭಾರತ ಮೂಲದ ಗಗನ ಯಾನಿ ಸುನೀತಾ ವಿಲಿಯಮ್ಸ್, ತವರಿಗೆ ಆಗಮಿಸಿದ್ದಾರೆ. ಅವರು ಇಂದು (ಸೆ.20) ಗಾಂಧೀಜಿಯವರ ಸಬರಮತಿ ಆಶ್ರಮಕ್ಕೆ ಭೇಟಿ ನೀಡುವರು.

ಅಹ್ಮದಾಬಾದ್‌ನ ಗುಜರಾತ್ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳೊಂದಿಗೆ ಶನಿವಾರ (ಸೆ. 22) ಸಂವಾದವಿದೆ. ಸೆ.28ರಂದು ಹೈದರಬಾದ್‌ನಲ್ಲಿ ನಡೆಯುವ 58ನೇ ಅಂತರಾಷ್ಟ್ರೀಯ ಬಾಹ್ಯಾಕಾಶ ಕಾಂಗ್ರೆಸ್‌ನಲ್ಲಿ ತಮ್ಮ ಅನುಭವಗಳನ್ನು ಹಂಚಿಕೊಳ್ಳಲಿದ್ದಾರೆ.

ಒಂದು ವಾರ ಕಾಲ ಅವರು ದೇಶದ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಸರ್ದಾರ್ ಪಟೇಲ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅವರನ್ನು ಅವರ ಚಿಕ್ಕಪ್ಪ ವಿಠಲ್ ಪಾಂಡ್ಯ ಬರಮಾಡಿಕೊಂಡರು. 2003ರಲ್ಲಿ ಹತ್ಯೆಯಾದ ಗುಜರಾತ್‌ನ ಮಾಜಿ ಗೃಹ ಸಚಿವ ಹರೇನ್ ಪಾಂಡ್ಯರ ಪುತ್ತಳಿಗೆ ಶ್ರದ್ಧಾಂಜಲಿ ಸಲ್ಲಿಸಲಿದ್ದಾರೆ.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+