ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸೋನಿಯಮ್ಮ ಕಾಂಗ್ರೆಸ್ ಅಧ್ಯಕ್ಷೆ; ಮಗ ಈಗ ಕಾರ್ಯದರ್ಶಿ!

By Staff
|
Google Oneindia Kannada News

ನವದೆಹಲಿ, ಸೆಪ್ಟೆಂಬರ್ 24 : ಅಖಿಲ ಭಾರತ ಕಾಂಗ್ರೆಸ್ ಸಮಿತಿಯನ್ನು ಪುನರ್ ರಚಿಸಲಾಗಿದ್ದು, ರಾಹುಲ್ ಗಾಂಧಿ ಅವರನ್ನು ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ ಸೋಮವಾರ(ಸೆ.24) ನೇಮಕ ಮಾಡಲಾಗಿದೆ.

ಉತ್ತರ ಪ್ರದೇಶದ ಅಮೇಥಿ ಕ್ಷೇತ್ರದಿಂದ ಲೋಕಸಭೆಗೆ ಅವರು ಚುನಾಯಿತರಾಗಿದ್ದು, ಈವರೆಗೆ ಯುವ ಕಾಂಗ್ರೆಸ್ ಮತ್ತು ಎನ್ಎಸ್ ಯುಐ ನಲ್ಲಿ ಅವರು ಕಾರ್ಯ ನಿರ್ವಹಿಸಿದ್ದರು. ರಾಹುಲ್ ನೇಮಕ ಪ್ರಕಟವಾದ ತಕ್ಷಣ, ಪಕ್ಷದ ಕಚೇರಿಯಲ್ಲಿ ಸೋಮವಾರ ಸಂಭ್ರಮಾಚರಣೆ ನಡೆಯಿತು. ರಾಹುಲ್ ನೇಮಕವನ್ನು ಕಳೆದ ಕೆಲವು ತಿಂಗಳಿಂದಲೂ ನಿರೀಕ್ಷಿಸಲಾಗಿತ್ತು.

ಲೋಕಸಭೆ ಮಧ್ಯಂತರ ಚುನಾವಣೆಗೆ ಕಾಲ ಸನ್ನಿಹಿತವಾಗಿದ್ದು, ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸಮಿತಿಯಲ್ಲಿ ಮಹತ್ವದ ಬದಲಾವಣೆಗಳು ನಡೆದಿವೆ ಎಂದು ರಾಜಕೀಯ ಪಂಡಿತರು ವ್ಯಾಖ್ಯಾನ ಮಾಡಿದ್ದಾರೆ. ರಾಹುಲ್ ಗೆ ಪಕ್ಷದ ಮಹತ್ವದ ಹೊಣೆಯನ್ನು ಒಪ್ಪಿಸಲಾಗಿದ್ದು, ಹಳೆಯ ಮುಖಗಳನ್ನು ಬದಲಿಸುವ ಪ್ರಯತ್ನ ನಡೆಯುತ್ತಿದೆ.

(ಏಜನ್ಸೀಸ್)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X