ರಾಜಭವನದ ಎದುರು ವಾಟಾಳ್ ನಾಗರಾಜ್ ಪ್ರತಿಭಟನೆ
ಬೆಂಗಳೂರು, ಅ.08 : ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತವನ್ನು ಯಾವುದೇ ಕಾರಣಕ್ಕೂ ಜಾರಿಗೆ ತರಬಾರದೆಂದು ಕನ್ನಡ ಚಳವಳಿ ಪಕ್ಷದ ನಾಯಕ ವಾಟಾಳ್ ನಾಗರಾಜ್ ಆಗ್ರಹಿಸಿದ್ದಾರೆ.
ರಾಜಭವನದ ಮುಂದೆ ತಮ್ಮ ಬೆಂಬಲಿಗರೊಂದಿಗೆ ಪ್ರತಿಭಟನೆ ನಡೆಸಿದ ಅವರು, ರಾಜ್ಯದಲ್ಲಿ ಹರಾಜಕ ಪರಿಸ್ಥಿತಿ ನಿರ್ಮಾಣವಾಗಿಲ್ಲ. ಅಧಿಕಾರ ಹಸ್ತಾಂತರಕ್ಕೆ ಸಂಬಂಧಿಸಿದಂತೆ ಎರಡು ಪಕ್ಷಗಳ ನಿಜ ಬಣ್ಣ ಬಯಲಾಗಿದೆ ಅಷ್ಟೆ. ಇದನ್ನೇ ನೆಪಮಾಡಿಕೊಂಡು ಕೇಂದ್ರದ ಯುಪಿಎ ಸರ್ಕಾರ, ರಾಷ್ಟ್ರಪತಿ ಆಡಳಿತ ಜಾರಿಗೆ ಮುಂದಾಗುವುದು ತಪ್ಪು ಎಂದು ಅಭಿಪ್ರಾಯಪಟ್ಟಿದ್ದಾರೆ.
ಮಧ್ಯಂತರ ವಿಧಾನಸಭಾ ಚುನಾವಣೆಯಷ್ಟೇ ಅಂತಿಮವಾಗಿ ಸದ್ಯಕ್ಕಿರುವ ದಾರಿ. ಜನಮತಕ್ಕೆ ಅವಕಾಶ ಕಲ್ಪಿಸಿಕೊಡಬೇಕು ಎಂದು ವಾಟಾಳ್ ಹೇಳಿದರು.
(ದಟ್ಸ್ ಕನ್ನಡ ವಾರ್ತೆ)












Click it and Unblock the Notifications