ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಡತನ ವಿರುದ್ಧ ವಿಶ್ವಸಂಸ್ಥೆಯೊಂದಿಗೆ ಆರ್ಟ್ ಆಫ್ ಲಿವಿಂಗ್

By Staff
|
Google Oneindia Kannada News

ಬೆಂಗಳೂರು, ಅ.13 : ರವಿಶಂಕರ್ ಗುರೂಜಿ ಅವರ ಆರ್ಟ್ ಆಫ್ ಲಿವಿಂಗ್ ಪ್ರತಿಷ್ಠಾನವು ವಿಶ್ವಸಂಸ್ಥೆಯೊಂದಿಗೆ ಕೈಜೋಡಿಸಿದೆ. 'ಶತಮಾನೋತ್ಸವ ಅಭಿವೃದ್ಧಿ ಗುರಿ"ಯನ್ನು ಸಾಧಿಸಲು ವಿಶ್ವಸಂಸ್ಥೆಯೊಂದಿಗೆ ಪ್ರತಿಷ್ಠಾನವು ತನ್ನನ್ನು ತೊಡಗಿಸಿಕೊಳ್ಳಲಿದೆ.

ವಿಶ್ವದಾದ್ಯಂತ ಇರುವ ಆರ್ಟ್ ಆಫ್ ಲಿವಿಂಗ್‌ನ ಸದಸ್ಯರು ಈ ಆಂದೋಲನದಲ್ಲಿ ಪಾಲ್ಗೊಳ್ಳುವರು. ಬಡತನ ನಿವಾರಣೆ, ಶಿಕ್ಷಣ, ಸಮಾನತೆ, ಏಡ್ಸ್ ನಿರ್ಮೂಲನೆ, ಪರಿಸರ ರಕ್ಷಣೆಯಂತಹ ಅಭಿವೃದ್ಧಿ ಕಾರ್ಯಕ್ರಮಗಳಲ್ಲಿ ತಮ್ಮನ್ನು ಸಕ್ರಿಯವಾಗಿ ತೊಡಗಿಸಿಕೊಳ್ಳಲಿದ್ದಾರೆ ಎಂದು ಪ್ರತಿಷ್ಠಾನ ತಿಳಿಸಿದೆ.

'ಎದ್ದು ನಿಲ್ಲಿ" ಎಂಬ ಬೃಹತ್ ಸಮಾವೇಶವನ್ನು ಪ್ರತಿಷ್ಠಾನವು ಅ.17ರಂದು ಆಯೋಜಿಸಲಿದೆ. ಈ ಕಾರ್ಯಕ್ರಮದಲ್ಲಿ ಲಕ್ಷಾಂತರ ಜನರು ಎದ್ದು ನಿಂತು ಪ್ರತಿಜ್ಞೆ ಮಾಡಲಿದ್ದಾರೆ. ಇದು ಗಿನ್ನಿಸ್ ದಾಖಲೆಗೆ ಸೇರ್ಪಡೆಯಾಗುವ ಸಾಧ್ಯತೆ ಇದೆ.

(ದಟ್ಸ್‌ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X