ಸಂಜೆ 5.30ಕ್ಕೆ ರಾಜ್ಯಪಾಲರೆದುರು ಶಾಸಕರ ಲೆಫ್ಟ್ ರೈಟ್
ಬೆಂಗಳೂರು, ಅ.29 : ರಾಜ್ಯಪಾಲ ರಾಮೇಶ್ವರ ಠಾಕೂರು ಎದುರು ತಮ್ಮ ಬಲಾಬಲ ಪ್ರದರ್ಶಿಸಲು ಬಿಜೆಪಿ ಮತ್ತು ಜೆಡಿಎಸ್ ಶಾಸಕರು ಇಂದು(ಅ.29) ಸಂಜೆ 5.30ಕ್ಕೆ ಪರೇಡ್ ನಡೆಸಲಿದ್ದಾರೆ.
ಬಿಜೆಪಿ ನಾಯಕ ಬಿ.ಎಸ್.ಯಡಿಯೂರಪ್ಪ ಅವರಿಗೆ 124ಶಾಸಕರ ಬೆಂಬಲವಿದ್ದು, ಸರ್ಕಾರ ರಚನೆಗೆ ಆಹ್ವಾನ ನೀಡಬೇಕು ಎಂದು ಬಿಜೆಪಿ ಮತ್ತು ಜೆಡಿಎಸ್ ಮುಖಂಡರು ರಾಜ್ಯಪಾಲರನ್ನು ಒತ್ತಾಯಿಸಿದ್ದಾರೆ.
ಬೆಂಗಳೂರಿನಲ್ಲಿ ಬೀಡುಬಿಟ್ಟಿರುವ ಬಿಜೆಪಿಯ ರಾಷ್ಟ್ರೀಯ ನಾಯಕರಾದ ಯಶವಂತ ಸಿನ್ಹಾ, ವೆಂಕಯ್ಯನಾಯ್ದು ರಾಜ್ಯಪಾಲರಿಂದ ಸಕಾರಾತ್ಮಕ ಪ್ರತಿಕ್ರಿಯೆಯನ್ನು ನಿರೀಕ್ಷಿಸಿದ್ದಾರೆ. 41ಶಾಸಕರನ್ನು ಒಂದುಗೂಡಿಸಲು ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿ ತಮ್ಮ ಕಸರತ್ತು ಮುಂದುವರೆಸಿದ್ದಾರೆ. ಈ ಮಧ್ಯೆ ಜೆಡಿಎಸ್ ಶಾಸಕರು ರೆಸಾರ್ಟ್ ಬದಲಿಸಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)












Click it and Unblock the Notifications