ಸರ್ಕಾರ ರಚನೆ ಮಾಡಲು ರಾಜ್ಯಪಾಲರಿಂದ ಗ್ರೀನ್ ಸಿಗ್ನಲ್?
ಬೆಂಗಳೂರು, ಅ.30 : ಕರ್ನಾಟಕ ರಾಜ್ಯದಲ್ಲಿನ ಬಿಜೆಪಿ ಸಂಸದರು, ರಾಜ್ಯದಲ್ಲಿ ಸರ್ಕಾರ ರಚಿಸಲು ರಾಷ್ಟ್ರಪತಿಗಳ ನೆರವು ಯಾಚಿಸಲು ನಿರ್ಧರಿಸಿದ್ದಾರೆ. ಈ ಮಧ್ಯೆ ರಾಜ್ಯಪಾಲ ರಾಮೇಶ್ವರ ಠಾಕೂರು ಸರ್ಕಾರ ರಚನೆಗೆ ಗ್ರೀನ್ ಸಿಗ್ನಲ್ ನೀಡುವ ಸಾಧ್ಯತೆಗಳಿವೆ ಎಂದು ಮೂಲಗಳು ಹೇಳಿವೆ.
ಬುಧವಾರ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರನ್ನು ಭೇಟಿ ಮಾಡಲಿರುವ ಬಿಜೆಪಿ ಸಂಸದರು, ಬಿ.ಎಸ್.ಯಡಿಯೂರಪ್ಪ ನೇತೃತ್ವದ ಮೈತ್ರಿಕೂಟವನ್ನು ಸರ್ಕಾರ ರಚನೆಗೆ ಆಹ್ವಾನಿಸಬೇಕು. ಈ ನಿಟ್ಟಿನಲ್ಲಿ ಅಗತ್ಯ ಮಾರ್ಗದರ್ಶನ ನೀಡುವಂತೆ ಕೋರಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಸದಾನಂದ ಗೌಡ ಸುದ್ದಿಗಾರರಿಗೆ ತಿಳಿಸಿದ್ದಾರೆ.
ರಾಜ್ಯಪಾಲ ರಾಮೇಶ್ವರ ಠಾಕೂರ್ ಸದ್ಯದಲ್ಲಿಯೇ, ಸರ್ಕಾರ ರಚನೆಗೆ ಬಿಜೆಪಿ ನೇತೃತ್ವದ ಮೈತ್ರಿಕೂಟಕ್ಕೆ ಆಹ್ವಾನ ನೀಡಲಿದ್ದಾರೆ ಎಂದು ಮೂಲಗಳು ಹೇಳಿವೆ. ಕೇಂದ್ರ ಸಂಪುಟ ಕರ್ನಾಟಕದ ಸದ್ಯದ ಪರಿಸ್ಥಿತಿಯನ್ನು ಚರ್ಚೆ ನಡೆಸುವ ಸಾಧ್ಯತೆಗಳಿವೆ.
(ದಟ್ಸ್ ಕನ್ನಡ ವಾರ್ತೆ)












Click it and Unblock the Notifications