ಸುಷ್ಮಾ ಸ್ವರಾಜ್ ಬೆಂಗಳೂರಿಗೆ ಆಗಮನ; ಚಳವಳಿ ತೀವ್ರ

ಬೆಂಗಳೂರು, ಅ.31 : ಬಿಜೆಪಿ ಇಂದು(ಅ.31) ಹಮ್ಮಿಕೊಂಡಿರುವ ರಾಜಭವನ ಚಲೋ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ನಗರಕ್ಕೆ ಬಿಜೆಪಿ ನಾಯಕಿ ಸುಷ್ಮಾ ಸ್ವರಾಜ್ ಆಗಮಿಸಿದ್ದಾರೆ.

ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಕೂಟಕ್ಕೆ ಸರ್ಕಾರ ರಚಿಸಲು ಆಹ್ವಾನ ನೀಡಬೇಕೆಂದು ಒತ್ತಾಯಿಸಿ ಇಂದು ರಾಜ ಭವನ ಚಲೋ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಬಿಜೆಪಿ ಜೊತೆಗೆ ಜೆಡಿಎಸ್ ಮುಖಂಡರು ಮತ್ತು ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ. ಸರ್ಕಾರ ರಚನೆಗೆ ಅವಕಾಶ ಕೋರಿ, ಮತ್ತೊಂದು ಕಡೆ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಮತ್ತು ಪ್ರಧಾನಿಗೆ ಮನವಿ ಸಲ್ಲಿಸಲು ಕರ್ನಾಟಕದ ಬಿಜೆಪಿ ಸಂಸದರು ನಿರ್ಧರಿಸಿದ್ದಾರೆ.

ರಾಜ್ಯಪಾಲರು ಮೌನ ಮುಂದುವರೆಸಿದ್ದು, ಇನ್ನೆರಡು ದಿನಗಳಲ್ಲಿ ಕೇಂದ್ರಕ್ಕೆ ತಮ್ಮ ವರದಿ ಸಲ್ಲಿಸುವ ಸಾಧ್ಯತೆಗಳಿವೆ. ಕರ್ನಾಟದಲ್ಲಿ ಕಾಂಗ್ರೆಸ್ ಉಸ್ತುವಾರಿ ವಹಿಸಿರುವ ಪೃಥ್ವಿರಾಜ್ ಚೌವ್ಹಾಣ್ ಇಂದು ಬೆಳಗ್ಗೆ 11.30ರ ಸುಮಾರಿನಲ್ಲಿ ರಾಜಭವನಕ್ಕೆ ಭೇಟಿ ನೀಡಿದ್ದು, ರಾಜ್ಯಪಾಲರ ಜೊತೆ ಮಾತುಕತೆ ನಡೆಸಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+