ರಿಯಲ್ ಎಸ್ಟೇಟ್ ದಂಧೆ: ಬೆಂಗಳೂರಲ್ಲಿ ಇನ್ನೊಂದು ಹತ್ಯೆ
ಬೆಂಗಳೂರು, ನ.07 : ರಾಜಧಾನಿಯಲ್ಲಿ ಮತ್ತೆ ರಕ್ತ ಹರಿದಿದೆ. ರಿಯಲ್ ಎಸ್ಟೇಟ್ ವ್ಯವಹಾರ ಮಾಡುತ್ತಿದ್ದ ಮಂಜುನಾಥ(28) ಭಯಾನಕವಾಗಿ ಕೊಲೆಗೀಡಾಗಿದ್ದಾರೆ. ದುಷ್ಕರ್ಮಿಗಳು ಮನೆಗೆ ನುಗ್ಗಿ ಮಾರಕಾಸ್ತ್ರಗಳಿಂದ ಕೊಚ್ಚಿ, ಕೊಲೆ ಮಾಡಿದ್ದಾರೆ.
ರಾತ್ರಿ 12.30ರ ಸುಮಾರಿನಲ್ಲಿ ದುಷ್ಕರ್ಮಿಗಳು, ಮನೆಗೆ ನುಗ್ಗಿ ಮಂಜುನಾಥ್ ತಂದೆತಾಯಿಯ ಎದುರಲ್ಲಿಯೇ ಅವರ ಮಗನನ್ನು ಕೊಚ್ಚಿ ಹಾಕಿದ್ದಾರೆ. ಇತ್ತೀಚೆಗೆ ಜಮೀನು ಮಾರಾಟ ವಿಷಯಕ್ಕೆ ಸಂಬಂಧಿಸಿದಂತೆ ಪುಟ್ಟದೊಂದು ಜಗಳ ನಡೆದಿತ್ತು ಎನ್ನಲಾಗಿದ್ದು, ಪೀಣ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಮುಂದುವರೆಸಿದ್ದಾರೆ.
ಆಟೋ ಚಾಲಕನಾಗಿದ್ದ ಮಂಜುನಾಥ, ಇತ್ತೀಚೆಗಷ್ಟೇ ರಿಯಲ್ ಎಸ್ಟೇಟ್ ವ್ಯವಹಾರ ಆರಂಭಿಸಿದ್ದ. ರಾಜಧಾನಿಯಲ್ಲಿ ರಿಯಲ್ ಎಸ್ಟೇಟ್ ವ್ಯವಹಾರಕ್ಕೆ ಸಂಬಂಧಿಸಿದಂತೆ ಆಗಾಗ ಕೊಲೆಗಳು ಸಾಮಾನ್ಯವಾಗುತ್ತಿವೆ. ಸಿನಿಮೀಯ ಮಾದರಿಯಲ್ಲಿ ಹತ್ಯೆಗಳು ನಡೆಯುತ್ತಿವೆ.
(ದಟ್ಸ್ ಕನ್ನಡ ವಾರ್ತೆ)












Click it and Unblock the Notifications