ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಉಡುಪಿ ಅಷ್ಟಮಠದಿ ಧರ್ಮಸೂಕ್ಷ್ಮ : ಮುಕ್ತ ಚರ್ಚೆಗೆ ಕರೆ

By Staff
|
Google Oneindia Kannada News

ಉಡುಪಿ, ನ.13 : ವಿದೇಶ ಪ್ರವಾಸ ಕೈಗೊಂಡ ಕಾರಣಕ್ಕೆ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥರು ವಿವಾದಕ್ಕೆ ಸಿಲುಕಿದ್ದಾರೆ. ಈ ಪ್ರಕರಣದ ಬಗ್ಗೆ ಸಾರ್ವಜನಿಕ ಚರ್ಚೆಯನ್ನು ನ.21ರಂದು ಬೆಳಗ್ಗೆ 10ರಿಂದ ಸಂಜೆ 6ರ ಅವಧಿಯಲ್ಲಿ ಆಯೋಜಿಸಲಾಗಿದೆ.

ಬಹಿರಂಗ ಚರ್ಚೆಗೆ ಪೇಜಾವರ ಮಠದ ಶ್ರೀ ವಿಶ್ವೇಶ ತೀರ್ಥರು ಆಹ್ವಾನ ನೀಡಿದ್ದಾರೆ. ಮಾಧ್ಯಮಗಳಲ್ಲಿ ಈ ಪ್ರಕರಣದ ತೀವ್ರ ಚರ್ಚೆಗೆ ಗುರಿಯಾಗಿದೆ. ಜನರಲ್ಲಿ ತಪ್ಪು ಅಭಿಪ್ರಾಯ ಸೃಷ್ಟಿಯಾಗಿದೆ. ಅಷ್ಟಮಠಗಳ ಆರೋಪಗಳು ಕೇಳಿ ಬಂದಿವೆ. ಈ ಹಿನ್ನೆಲೆಯಲ್ಲಿ ಚರ್ಚೆಗೆ ಯಾರು ಬೇಕಾದರೂ ಆಗಮಿಸಬಹುದು ಎಂದು ಶ್ರೀಗಳು ಹೇಳಿದ್ದಾರೆ.

ಪುತ್ತಿಗೆ ಶ್ರೀಗಳು ವಿದೇಶಕ್ಕೆ ಹೋಗಿ ಅಲ್ಲಿ ಅನೇಕ ಉತ್ತಮ ಕೆಲಸಗಳನ್ನು ಮಾಡಿದ್ದಾರೆ. ಅವುಗಳನ್ನು ನಾವು ಶ್ಲಾಘಿಸುತ್ತೇವೆ. ಅಷ್ಟಮಠಗಳಲ್ಲಿ ಮೂಡಿರುವ ಧರ್ಮ ಸೂಕ್ಷ್ಮಗಳ ಬಗ್ಗೆ ನಾವು ಚರ್ಚೆ ನಡೆಸಿ, ಬಿಕ್ಕಟ್ಟನ್ನು ಬಗೆಹರಿಸುತ್ತೇವೆ ಎಂದು ಶ್ರೀಗಳು ತಿಳಿಸಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

ಏನಿದು ವಿವಾದ? :
ಪುತ್ತಿಗೆ ಶ್ರೀಗಳಿಗೆ ಉಡುಪಿ ಕೃಷ್ಣನ ಪೂಜಿಸುವ ಹಕ್ಕಿಲ್ಲವಂತೆ!

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X