• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ರಾಷ್ಟ್ರಪತಿ ಆಡಳಿತ : ಕಸರತ್ತಿಗೆ ಇನ್ನೂ ಇದೆ ಅವಕಾಶ!

By Staff
|

ನವದೆಹಲಿ, ನ.20 : ಕರ್ನಾಟಕದಲ್ಲಿ ರಾಷ್ಟ್ರಪತಿ ಆಡಳಿತಕ್ಕೆ ಕೇಂದ್ರ ಸಚಿವ ಸಂಪುಟ ಶಿಫಾರಸು ಮಾಡಿದೆ. ಮಂಗಳವಾರ(ನ.20) ಬೆಳಗ್ಗೆ ನಡೆದ ತುರ್ತು ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಯಿತು. ಅಲ್ಲದೇ ವಿಧಾನಸಭೆಯನ್ನು ಅಮಾನತ್ತಿನಲ್ಲಿಡುವಂತೆಯೂ ಕೇಂದ್ರ ಶಿಫಾರಸು ಮಾಡಿದೆ. ಹೀಗಾಗಿ ಹೊಸ ಮೈತ್ರಿಕೂಟ ರಚನೆಯ ಅವಕಾಶ ಜೀವಂತವಾಗಿ ಉಳಿದಿದೆ.

ರಾಜ್ಯಪಾಲ ರಾಮೇಶ್ವರ ಠಾಕೂರು ಸಲ್ಲಿಸಿದ ಶಿಫಾರಸ್ಸಿನನ್ವಯ ಕೇಂದ್ರ ಸಂಪುಟ ಈ ತೀರ್ಮಾನ ಕೈಗೊಂಡಿದೆ. ಪ್ರಧಾನಿ ಮನಮೋಹನ್ ಸಿಂಗ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕರ್ನಾಟಕದ ರಾಜಕೀಯ ಬೆಳವಣಿಗೆಗಳ ಚರ್ಚಿಸಲಾಯಿತು. ಕಳೆದ ಎರಡು ತಿಂಗಳಲ್ಲಿ ಎರಡನೇ ಸಲ ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆಗೆ ಕೇಂದ್ರ ಸಮ್ಮತಿ ಸೂಚಿಸಿದೆ.

ಕೇಂದ್ರ ಸಂಪುಟದ ತೀರ್ಮಾನವನ್ನು ಬಿಜೆಪಿ ಸ್ವಾಗತಿಸಿದೆ. ಕರ್ನಾಟಕದಲ್ಲಿ ರಾಜಕೀಯ ಅತಂತ್ರತೆಗೆ ಮಧ್ಯಂತರ ಚುನಾವಣೆಯೊಂದೇ ಮದ್ದು. ಕೂಡಲೇ ವಿಧಾನಸಭೆ ವಿಸರ್ಜಿಸಿ ಚುನಾವಣೆ ನಡೆಸಬೇಕೆಂದು ಬಿಜೆಪಿ ಒತ್ತಾಯಿಸಿದೆ. ಈ ಹಿಂದೆ ಅ.9ರಿಂದ ನ.12ರ ತನಕ ಅಂದರೆ 34ದಿನಗಳ ಕಾಲ ಕರ್ನಾಟಕದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಯಲ್ಲಿತ್ತು.

(ಏಜನ್ಸೀಸ್)

ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more