ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಗುಜರಾತ್ ಮುಖ್ಯಮಂತ್ರಿಯಾಗಿ ಮೋದಿ ಡಿ.27 ಪ್ರಮಾಣ?

By Staff
|
Google Oneindia Kannada News

ಅಹ್ಮದಾಬಾದ್, ಡಿ.23 : ಮೂರನೆ ಬಾರಿಗೆ ಗುಜರಾತ್ ಮುಖ್ಯಮಂತ್ರಿಯಾಗಿ ನರೇಂದ್ರ ಮೋದಿ ಡಿ. 27ರಂದು ಪ್ರಮಾಣ ಸ್ವೀಕರಿಸಲಿದ್ದಾರೆ ಎಂದು ಬಿಜೆಪಿ ಪ್ರಕಟಿಸಿದೆ. 87 ಸಾವಿರ ಮತಗಳಿಂದ ಮೋದಿ ಮಣಿನಗರ್ ವಿಧಾನಸಭಾ ಕ್ಷೇತ್ರದಿಂದ ಗೆದ್ದಿದ್ದಾರೆ.

ಗುಜರಾತ್‌ನಲ್ಲಿ ಬಿಜೆಪಿ ಪಕ್ಷ ಅಧಿಕಾರಕ್ಕೆ ಬರುತ್ತಿರುವುದು ಇದು ನಾಲ್ಕನೆ ಬಾರಿ. ಒಟ್ಟು 182 ವಿಧಾನಸಭಾ ಸ್ಥಾನಗಳಲ್ಲಿ ಬಿಜೆಪಿ 117, ಕಾಂಗ್ರೆಸ್ 61 ಇತರರು 4 ಸ್ಥಾನಗಳಲ್ಲಿ ಗೆದ್ದಿದ್ದಾರೆ. ಮೋದಿ ಡಿ.27ರಂದು ಪ್ರಮಾಣ ಸ್ವೀಕರಿಸಲಿದ್ದಾರೆಂದು ಬಿಜೆಪಿಯ ಹಿರಿಯ ನಾಯಕ ಎಲ್.ಕೆ ಆಡ್ವಾಣಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಅವರಿಗೆ (ನರೇಂದ್ರ ಮೋದಿ) ಇದೊಂದು ಅದ್ಭುತ ಗೆಲುವು, ಸದಾಕಾಲ ನೆನಪಿನಲ್ಲಿರುವ ಗೆಲುವು. ಈ ಗೆಲುವನ್ನು ಕಂಡು ನನಗೇನು ಅಸೂಯೆ ಹುಟ್ಟುತ್ತಿಲ್ಲ ಎಂದು ಕಾಂಗ್ರೆಸ್ ವಕ್ತಾರ ಅಭಿಷೇಕ್ ಮನು ಸಿಂಗ್ವಿ ಪ್ರತಿಕ್ರಿಯಿಸಿದ್ದಾರೆ. ಇದು ಬಿಜೆಪಿಯ ಗೆಲುವು. ಮೋದಿ ಪಂದ್ಯದ ಪುರುಷೋತ್ತಮ. ಅವರ ಸಾಮರ್ಥ್ಯವನ್ನು ನಾವು ಪ್ರಶಂಸಿಸುತ್ತೇವೆ ಎಂದು ಬಿಜೆಪಿ ವಕ್ತಾರ ರವಿಶಂಕರ್ ಪ್ರಸಾದ್ ಹರ್ಷವ್ಯಕ್ತಪಡಿಸಿದ್ದಾರೆ.

ಕಳೆದ ಚುನಾವಣೆಗಳಲ್ಲಿ ಬಿಜೆಪಿ 127, ಕಾಂಗ್ರೆಸ್ 51 ಸ್ಥಾನಗಳಲ್ಲಿ ಗೆದ್ದಿದ್ದವು. ಫಲಿತಾಂಶಗಳು ಪ್ರಕಟವಾಗುತ್ತಿದ್ದಂತೆ ಬಿಜೆಪಿ ಕಾರ್ಯಕರ್ತರು ಅಹ್ಮದಾಬಾದ್‌ನ ಪಕ್ಷದ ಕಚೇರಿ ಮುಂದೆ ಪಟಾಕಿ ಸಿಡಿಸಿ ಸಂಭ್ರಮಿಸಿದರು.

(ಏಜನ್ಸೀಸ್)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X