ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಿಇಟಿ ಸೀಟು ಹಂಚಿಕೆ : ಸರ್ಕಾರ ಹಾಗೂ ಖಾಸಗಿ ಸಂಸ್ಥೆ ಸಭೆ

By Staff
|
Google Oneindia Kannada News

ಬೆಂಗಳೂರು, ಡಿ.27: ಸಿಇಟಿ ಸೀಟು ಹಂಚಿಕೆ ಹಾಗೂ ಶುಲ್ಕ ನಿಗದಿಯ ಬಗ್ಗೆ ಚರ್ಚಿಸಲು ಸರ್ಕಾರಿ ಹಾಗೂ ಖಾಸಗಿ ಶಿಕ್ಷಣ ಸಂಸ್ಥೆಗಳು ಡಿ.29 ರಂದು ಮಹತ್ವದ ಸಭೆ ಕರೆದಿವೆ.

ಡಿ.31 ರಂದು ಖಾಸಗಿ ಮೆಡಿಕಲ್ ಹಾಗೂ ಡೆಂಟಲ್ ಕಾಲೇಜಿನ ವ್ಯವಸ್ಥಾಪಕರ ಜೊತೆ ಮಾತುಕತೆ ನಡೆಸಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA) ಪ್ರಕಟಣೆ ಹೊರಡಿಸಿದೆ. ಸರ್ಕಾರದ ಪರವಾಗಿ ರಾಜ್ಯಪಾಲರ ಪ್ರತಿನಿಧಿಯಾಗಿ ರಾಜ್ಯಪಾಲರ ಸಲಹೆಗಾರ ಪಿ.ಪಿ. ಪ್ರಭು ಸಭೆಯ ಮುಂದಾಳತ್ವವನ್ನು ವಹಿಸಲಿದ್ದಾರೆ. ಸೀಟು ಹಂಚಿಕೆ ವಿಷಯವಾಗಿ ಕರೆಯಲಾಗಿರುವ ಪ್ರಥಮ ಸಭೆ ಇದಾಗಿದ್ದು, ಅವಶ್ಯ ಬಿದ್ದರೆ ಸಭೆಗಳನ್ನು ಹೆಚ್ಚಿಸಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಹೇಳಿದೆ.

(ದಟ್ಸ್ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X