ಮಂಗಳೂರು ಉದ್ವಿಗ್ನ; ಬಿಸಿ ರೋಡಲ್ಲಿ ನಿಷೇಧಾಜ್ಞೆ
ಮಂಗಳೂರು, ಡಿ.28: ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಹಿನ್ನಲೆಯಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ಸಂಭವಿಸಿ ಮಂಗಳೂರಿನಲ್ಲಿ ಪರಿಸ್ಥಿತಿ ಬಿಗಡಾಯಿಸಿದೆ. ಮಂಗಳೂರಿನ ಬಿ.ಸಿ ರೋಡ್ನಲ್ಲಿ ಇಂದು (ಡಿ.28) ನಿಷೇಧಾಜ್ಞೆ ಜಾರಿ ಮಾಡಲಾಗಿದೆ.
ಎರಡು ಗುಂಪುಗಳ ನಡುವಿನ ಘರ್ಷಣೆ ತೀರಾ ವಿಕೋಪಕ್ಕೆ ಹೋಗಿದ್ದು ಉದ್ರಿಕ್ತರು 3 ಅಂಗಡಿಗಳಿಗೆ ಬೆಂಕಿ ಇಟ್ಟಿರುವುದಾಗಿ ತಿಳಿದುಬಂದಿದೆ. ಪರಿಸ್ಥಿತಿಯನ್ನು ನಿಯಂತ್ರಿಸಲು ಪೋಲೀಸರು ಲಾಠಿ ಪ್ರಯೋಗ ಮಾಡಬೇಕಾಯಿತು. ಘಟನೆಯಿಂದ 7ಜನ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಮಾಧ್ಯಮ ಪ್ರತಿನಿಧಿಗಳ ಮೇಲೂ ಹಲ್ಲೆ ಮಾಡಲಾಗಿದೆ ಎಂದು ತಿಳಿದುಬಂದಿದೆ.
(ದಟ್ಸ್ಕನ್ನಡ ವಾರ್ತೆ)


Click it and Unblock the Notifications
