• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ರಾಜ್ಯಪಾಲರ ದರ್ಬಾರಿಗೆ ನಲುಗಿದ ಐಎಎಸ್ ಅಧಿಕಾರಿಗಳು

By Staff
|

ಬೆಂಗಳೂರು, ಜ.08: ರಾಜ್ಯಪಾಲ ರಾಮೇಶ್ವರ ಠಾಕೂರ್ ಅವರ ಆಡಳಿತ ವೈಖರಿಗೆ ಐಎಎಸ್ ಆಧಿಕಾರಿಗಳು ದಂಗಾಗಿದ್ದಾರೆ. ಕಳೆದ ವಾರ ಐಎಎಸ್, ಐಪಿಎಸ್ ಅಧಿಕಾರಿಗಳ ವರ್ಗಾವಣೆ ಬಿಸಿಯಾಗಿರುವಾಗಲೇ ಸೋಮವಾರ ಮಧ್ಯರಾತ್ರಿ ಮತ್ತೆ 21 ಅಧಿಕಾರಿಗಳಿಗೆ ವರ್ಗಾವಣೆಯ ಬಿಸಿ ಮುಟ್ಟಿಸಿದ್ದಾರೆ.

ವರ್ಗಾವಣೆಯ ಲ್ಲದೆ ಕೆಲ ಅಧಿಕಾರಿಗಳ ಸ್ಥಾನಪಲ್ಲಟವಾಗಿದೆ.ಜಲಸಂಪನ್ಮೂಲ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿದ್ದ ಎ.ಕೆ.ಎಂ.ನಾಯಕ್ ಅವರನ್ನು ರಾಜ್ಯಪಾಲರ ನೂತನ ಪ್ರಧಾನ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ.ಇಂಧನ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿದ್ದ ದಿಲೀಪ್ ರಾವ್ ಬಿಡಿಎ ಅಧ್ಯಕ್ಷರಾಗಿ ನಿಯುಕ್ತರಾಗಿದ್ದಾರೆ.

ವರ್ಗಾವಣೆಗೊಂಡ ಅಧಿಕಾರಿಗಳ ವಿವರ ಹೀಗಿದೆ:

  • ರಾಜ್ಯ ಮೇಲ್ಮನವಿ ಪ್ರಾಧಿಕಾರದ ಅಧ್ಯಕ್ಷರಾಗಿದ್ದ ರಂಜಿನಿ ಶ್ರೀಕುಮಾರ್ ಅವರು ವಸತಿ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ಅಧಿಕಾರ ವಹಿಸಲಿದ್ದಾರೆ.
  • ಇಂಧನ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿದ್ದ ಎಲ್.ವಿ.ನಾಗರಾಜನ್ ಅವರು ಜಲ ಸಂಪನ್ಮೂಲ ಇಲಾಖೆಯ ನೂತನ ಪ್ರಧಾನ ಕಾರ್ಯದರ್ಶಿಯಾಗಲಿದ್ದಾರೆ. ಜತೆಗೆ ರಾಜ್ಯ ವಿದ್ಯುತ್ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿ ಕಾರ್ಯನಿರ್ವಹಿಸಲಿದ್ದಾರೆ.
  • ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿದ್ದ ತಪನ್ ಸೇನಾಪತಿ ಅವರನ್ನು ಕೆ ಎಫ್ ಸಿ ಎ ಅಧ್ಯಕ್ಷರಾಗಿ ನೇಮಿಸಲಾಗಿದೆ.
  • ಕೆಎಫ್ ಸಿಎ ಅಧ್ಯಕ್ಷರಾಗಿದ್ದ ವಿ.ಉಮೇಶ್ ಅವರನ್ನು ರಾಜ್ಯ ಮೇಲ್ಮನವೈ ಪ್ರಾಧಿಕಾರದ ಅಧ್ಯಕ್ಷ ಸ್ಥಾನಕ್ಕೆ ವರ್ಗಾಯಿಸಲಾಗಿದೆ.
  • ರಾಜ್ಯ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯ ವ್ಯವಸ್ಥಾಪಕರಾಗಿದ್ದ ಅರವಿಂದ್ ರಿಶ್ಬುದ್ ಅವರನ್ನು ವಾಣಿಜ್ಯ ಮತ್ತುಕೈಗಾರಿಕಾ ಇಲಾಖೆಯ ಕಾರ್ಯದರ್ಶಿಯಾಗಿ ನಿಯುಕ್ತಿಗೊಳಿಸಲಾಗಿದೆ
  • ರಾಜ್ಯ ಆರೋಗ್ಯ ವ್ಯವಸ್ಥೆ ಅಭಿವೃದ್ಧಿ ಯೋಜನೆಯ ನಿರ್ದೇಶಕರಾಗಿದ್ದ ಎಂ. ಮದನ ಗೋಪಾಲ್ ಅವರನ್ನು ಆರೋಗ್ಯ ಮತ್ತು ಕುಟುಂಬಕಲ್ಯಾಣ ಇಲಾಖೆಯ ಕಾರ್ಯದರ್ಶಿಯಾಗಲಿದ್ದಾರೆ.
  • ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷರಾಗಿದ್ದ ಪಿ.ಬಿ.ರಾಮಮೂರ್ತಿ ಅವರನ್ನು ರಾಜ್ಯಮಾನವ ಹಕ್ಕು ಆಯೋಗದ ಕಾರ್ಯದರ್ಶಿಯನ್ನಾಗಿ ನೇಮಿಸಲಾಗಿದೆ.
  • ಕ್ರೀಡಾ ಮತ್ತು ಯುವಜನ ಸೇವಾ ಕಾರ್ಯದರ್ಶಿಯಾಗಿದ್ದ ಎ.ಎಸ್. ಶ್ರೀಕಂಠ ಅವರನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಕಾರ್ಯದರ್ಶಿಯನ್ನಾಗಿ ನಿಯುಕ್ತಿಗೊಳಿಸಲಾಗಿದೆ.
  • ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಕಾರ್ಯದರ್ಶಿಯಾಗಿದ್ದ ಮಹೇಂದ್ರ ಜೈನ್ ಅವರನ್ನು ಬೆಂಗಳೂರಿನ ಉದ್ಯೋಗ ಮತ್ತು ತರಬೇತಿ ಇಲಾಖೆಯ ಆಯುಕ್ತರನ್ನಾಗಿ ವರ್ಗಾಯಿಸಲಾಗಿದೆ.
  • ರೇಷ್ಮೆ ಇಲಾಖೆಯ ಆಯುಕ್ತರಾಗಿದ್ದ ಮಹಮ್ಮದ್ ಸನಾವುಲ್ಲಾ ಅವರನ್ನು ಸಹಕಾರಿ ಇಲಾಖೆಯ ರಿಜಿಸ್ಟ್ರಾರ್ ಸ್ಥಾನಕ್ಕೆ ವರ್ಗಾಯಿಸಲಾಗಿದೆ.
  • ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯ ಮುಖ್ಯ ಯೋಜನಾಧಿಕಾರಿಯಾಗಿದ್ದ ಗೋಪಾಲಕೃಷ್ನೇಗೌಡ ಅವರನ್ನು ನಗರಾಭಿವೃದ್ಧಿ ಇಲಾಖೆಗೆ ವರ್ಗಾಯಿಸಲಾಗಿದೆ.
  • ಕಾಲೇಜು ಶಿಕ್ಷಣ ಆಯುಕ್ತರಾಗಿದ್ದ ಎಂ.ವಿ. ಜಯಂತಿ ಅವರನ್ನು ಜಲಸಂಪನ್ಮೂಲ(ಕಿರು ನೀರಾವರಿ) ಇಲಾಖೆಗೆ ವರ್ಗಾಯಿಸಲಾಗಿದೆ.
  • ಗಂಗಾರಾಮ್ ಬಡೇರಿಯಾ ಅವರನ್ನು ಗುಲ್ಬರ್ಗದವಲಯ ಸಾರ್ವಜನಿಕ ಶಿಕ್ಷಣ ಇಲಾಖೆಗೆ ನಿಯೋಜಿಸಲಾಗಿದೆ.
  • ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಕಾರ್ಯದರ್ಶಿಯಾಗಿದ್ದ ಜಿ.ವಿ. ಕೊಂಗವಾಡರನ್ನು ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಗೆ ವರ್ಗ ಮಾಡಲಾಗಿದೆ.
  • ಬೆಂಗಳೂರಿನ ಕೈಗಾರಿಕಾ ಮತ್ತು ತರಬೇತಿ ಇಲಾಖೆ ಆಯುಕ್ತರಾಗಿದ್ದ ಗೌರವ್ ಗುಪ್ತಾ ಅವರನ್ನು ನಗರ ಸಾರಿಗೆ ವಿಭಾಗಕ್ಕೆ ವರ್ಗಾಯಿಸಲಾಗಿದೆ.
  • ಸಹಕಾರಿ ಒಕ್ಕೂಟಗಳ ರಿಜಿಸ್ಟ್ರಾರ್ ಆಗಿದ್ದ ನಿಲಯ್ ಮಿತಾಶ್ ಅವರನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಯೋಜನಾ ನಿರ್ದೇಶಕರನ್ನಾಗಿ ನೇಮಕ ಮಾಡಲಾಗಿದೆ. ಇದಲ್ಲದೆ ರಾಷ್ಟ್ರೀಯಗ್ರಾಮೀಣ ಆರೋಗ್ಯ ಯೋಜನೆಯ ಹೆಚ್ಚುವರಿ ಉಸ್ತುವಾರಿಯನ್ನು ನೀಡಲಾಗಿದೆ.
  • ಪೌರಾಡಳಿತ ಇಲಾಖೆ ಅಯುಕ್ತರಾಗಿದ್ದ ಬಿ.ಪಿ.ಕನಿರಾಂ ಅವರನ್ನು ಲೋಕೋಪಯೋಗಿ ಇಲಾಖೆಗೆ ವರ್ಗಾಯಿಸಲಾಗಿದೆ.

(ಏಜನ್ಸೀಸ್)

ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more