ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಚುಡಾಯಿಸುವುದು ಕೂಡ ರೇಪ್‌ಗೆ ಸಮಾನ

By Staff
|
Google Oneindia Kannada News

ಚುಡಾಯಿಸುವುದು ಕೂಡ ರೇಪ್‌ಗೆ ಸಮಾನಬೆಂಗಳೂರು, ಜ.18 : ಮುಂಬರುವ ಸಂಸತ್ ಅಧಿವೇಶನದಲ್ಲಿ ಲೈಂಗಿಕ ದಬ್ಬಾಳಿಕೆಯ ವಿರುದ್ಧ ಮಸೂದೆಯನ್ನು ಮಂಡಿಸಲಾಗುವುದು ಎಂದು ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ಗಿರಿಜಾ ವ್ಯಾಸ್ ಹೇಳಿದ್ದಾರೆ.

ಶುಕ್ರವಾರ ಬೆಂಗಳೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡುತ್ತಿದ್ದ ಅವರು, ಬಲಾತ್ಕಾರ ಪ್ರಕರಣದಲ್ಲಿ ಅತ್ಯಂತ ಕಠಿಣ ಶಿಕ್ಷೆ ನೀಡಬೇಕು ಮತ್ತು ಚುಡಾಯಿಸುವುದನ್ನು ಕೂಡ ರೇಪ್ ಅಂತಲೇ ಪರಿಗಣಿಸಬೇಕು ಎಂದು ಆಯೋಗ ಶಿಫಾರಸು ಮಾಡಿದೆ ಎಂದರು. ಭಾರತದಲ್ಲಿ ಹುಡುಗಿಯರನ್ನು ಕಿಚಾಯಿಸುವುದು, ಬಲಾತ್ಕಾರಿಸುವುದು ಮತ್ತು ಅಸಭ್ಯವಾಗಿ ವರ್ತಿಸುವುದು ಹೆಚ್ಚಾಗುತ್ತಿದೆ ಎಂದು ಅವರು ಕಳವಳ ವ್ಯಕ್ತಪಡಿಸಿದರು.

ಈ ಮಸೂದೆಯ ಜೊತೆಗೆ ಕಚೇರಿಗಳಲ್ಲಿ ನಡೆಯುವ ಲೈಂಗಿಕ ಕಿರುಕುಳದ ವಿರುದ್ಧವೂ ಮಸೂದೆಯನ್ನು ಮುಂಬರುವ ಅಧಿವೇಶನದಲ್ಲಿ ಉಭಯ ಸದನಗಳೆದುರಿಗೆ ಮಂಡಿಸಲಾಗುವುದು ಎಂದು ಅವರು ತಿಳಿಸಿದರು. ರಾಷ್ಟ್ರದಲ್ಲಿ ಮಹಿಳೆಯರ ರಕ್ಷಣೆಗಾಗಿ ನಡೆಸುವ ಜಾಗೃತಾ ಕಾರ್ಯಕ್ರಮಗಳಿಗೆ ಹೆಚ್ಚಿನ ಅನದಾನವನ್ನು ನೀಡಬೇಕೆಂದು ಕೇಂದ್ರಕ್ಕೆ ಆಯೋಗ ಒತ್ತಾಯಿಸಿದೆ ಎಂದು ವ್ಯಾಸ್ ಹೇಳಿದರು.

(ದಟ್ಸ್‌ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X