ಮಹಾರಾಷ್ಟ್ಟ್ರಕ್ಕೆ ಎಸ್ ಎಂ ಕೃಷ್ಣ ಗುಡ್ ಬೈ
ನವದೆಹಲಿ, ಜ.24: ಮಹಾರಾಷ್ಟ್ರ ರಾಜ್ಯಪಾಲ ಎಸ್.ಎಂ.ಕೃಷ್ಣ ಶೀಘ್ರವೇ ಸಕ್ರಿಯ ರಾಜಕಾರಣಕ್ಕೆ ಮರಳಲು ಸಜ್ಜಾಗಿದ್ದಾರೆ. ಫೆಬ್ರವರಿ ಮೊದಲ ವಾರದಲ್ಲಿ ತಮ್ಮ ಹುದ್ದೆಗೆ ರಾಜೀನಾಮೆ ನೀಡಲಿದ್ದು ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಮಂಡ್ಯ ಜಿಲ್ಲೆಯ ಮದ್ದೂರಿನಿಂದ ಸ್ಪರ್ಧಿಸಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.
ಕಳೆದ ವಾರ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿ, ರಾಜಭವನ ಸಾಕಾಗಿದೆ ದಯವಿಟ್ಟು ಸಕ್ರಿಯ ರಾಜಕೀಯಕ್ಕೆ ಮರಳಲು ಅವಕಾಶ ಮಾಡಿಕೊಡಿ ಎಂದು ಮನವಿ ಮಾಡಿದ್ದಾರೆ. ಕೃಷ್ಣ ಅವರ ಮುಂದಿನ ರಾಜಕೀಯ ಭವಿಷ್ಯ ಹೈಕಮಾಂಡ್ ನಿರ್ಧಾರವನ್ನು ಅವಲಂಬಿಸಿದೆ.
ಎಸ್.ಎಂ. ಕೃಷ್ಣ ಸಕ್ರಿಯ ರಾಜಕೀಯಕ್ಕೆ ಮರಳುವುದನ್ನು ರಾಜ್ಯ ಕಾಂಗ್ರೆಸ್ ವ್ಯವಹರಗಳ ಹೊಣೆ ಹೊತ್ತಿರುವ ಕೇಂದ್ರ ಸಚಿವ ಪೃಥ್ವಿರಾಜ್ ಚವ್ಹಾಣ್ ಬುಧವಾರ ಸುದ್ದಿಗಾರರಿಗೆ ತಿಳಿಸಿದರು. ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯ್ಲಿ ನಿವಾಸದಲ್ಲಿ ಸುದ್ದಿಗಾರರಿಗೆ ಏರ್ಪಡಿಸಿದ್ದ ಭೋಜನ ಕೂಟದಲ್ಲಿ ಈ ಮಾಹಿತಿ ನೀಡಿದರು.
(ದಟ್ಸ್‌ಕನ್ನಡ ವಾರ್ತೆ)












Click it and Unblock the Notifications