• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ರಾಷ್ಟ್ರಪತಿ ಆಡಳಿತ ನವೆಂಬರ್ ವರೆಗೆ ಮುಂದುವರಿಕೆ?

By Staff
|

ನವದೆಹಲಿ,ಫೆ.15: ಕರ್ನಾಟಕದ ರಾಜಕೀಯ ನಕ್ಷೆ ಬದಲಾಗಲಿದೆ. ವಿಧಾನಸಭೆ ಮತ್ತು ಲೋಕಸಭೆ ಚುನಾವಣಾ ಕ್ಷೇತ್ರಗಳ ಮರುವಿಗಂಡಣೆಗೆ ಪ್ರಧಾನಿ ಮನಮೋಹನ್ ಸಿಂಗ್ ನೇತೃತ್ವದ ಕೇಂದ್ರ ಸಚಿವ ಸಂಪುಟ ಗುರುವಾರ ಅಂಗೀಕಾರ ನೀಡಿದೆ. ಹಾಗಾಗಿ ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ನವೆಂಬರ್ ವರೆಗೂ ಮುಂದುವರಿಯುವ ಸೂಚನೆಗಳು ಕಾಣುತ್ತಿವೆ.

ಅಸ್ಸಾಂ, ಅರುಣಾಚಲ ಪ್ರದೇಶ, ಮಣಿಪುರ, ನಾಗಾಲ್ಯಾಂಡ್ ಹಾಗೂ ಝಾರ್ಖಂಡ್ ರಾಜ್ಯಗಳನ್ನು ಹೊರತುಪಡಿಸಿ 24 ರಾಜ್ಯಗಳ ಹಾಗೂ ಕೇಂದ್ರಾಡಳಿತ ಪ್ರದೇಶಗಳ ಕ್ಷೇತ್ರ ಪುನರ್ವಿಂಗಡಣೆಗೆ ಕೇಂದ್ರ ಸರ್ಕಾರ ಅಂಗೀಕರಿಸಿದೆ. ಈ ಪ್ರಸ್ತಾಪಕ್ಕೆ ರಾಷ್ಟ್ರಪತಿಗಳು ಅಂಕಿತ ಹಾಕಿದೊಡನೆ ಕ್ಷೇತ್ರ ಮರುವಿಂಗಡನೆ ಜಾರಿಗೆ ಬರಲಿದೆ. ಎರಡು ಮೂರು ದಿನಗಳಲ್ಲಿ ರಾಷ್ಟ್ರಪತಿಗ ಳ ಅಂಕಿತ ದೊರೆಯುವ ಸಾಧ್ಯತೆಗಳಿವೆ.

ಕೇಂದ್ರ ಸರ್ಕಾರದ ಈ ನಿರ್ಧಾರದಿಂದ ಮೇ.28ರೊಳಗೆ ನಡೆಯಬೇಕಾಗಿದ್ದ ಕರ್ನಾಟಕ ವಿಧಾನ ಸಭೆ ಚುನಾವಣೆ ನವೆಂಬರ್ ಗೆ ಮುಂದೂಡುವ ಸಂಭವವಿದೆ. ಕ್ಷೇತ್ರ ಮರುವಿಂಗಡಣೆ ಪ್ರಕಾರ ಚುನಾವಣೆ ನಡೆಸಲು ನಾಲ್ಕರಿಂದ ಆರು ತಿಂಗಳ ಕಾಲಾವಧಿ ಬೇಕು ಎಂದು ಕೇಂದ್ರ ಚುನಾವಣಾ ಆಯಿಕ್ತ ಎನ್.ಗೋಪಾಲ ಕೃಷ್ಣ ತಿಳಿಸಿದ್ದಾರೆ.

ಕ್ಷೇತ್ರ ಪುನರ್ವಿಂಗಡಣೆಗೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿರುವ ಕ್ರಮವನ್ನು ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಹಾಗೂ ಜೆಡಿಯು ಪಕ್ಷಗಳು ಸ್ವಾಗತಿಸಿವೆ. ಕ್ಷೇತ್ರ ಪುನರ್ವಿಂಗಡಣೆ ನೆಪದಲ್ಲಿ ಚುನಾವಣೆಗಳನ್ನು ಮುಂದೂಡುವುದು ಬೇಡ ಎಂದು ಜೆಡಿಯು ರಾಜ್ಯ ಘಟಕದ ಅಧ್ಯಕ್ಷ ಬಿ.ಸೋಮಶೇಖರ್ ಪ್ರತಿಕ್ರಿಯಿಸಿದ್ದಾರೆ.

ಕ್ಷೇತ್ರಗಳ ಮರುವಿಂಗಡಣೆಯಿಂದ ಪರಿಶಿಷ್ಟರಿಗೆ ಸಾಮಾಜಿಕ ನ್ಯಾಯ ಹೆಚ್ಚಿನ ಸ್ಥಾನಮಾನಗಳು ಸಿಗುತ್ತವೆ ಎಂದು ಪ್ರದೇಶ್ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೇಂದ್ರದ ನಿಲುವನ್ನು ಸ್ವಾಗತಿಸಿದ್ದಾರೆ. ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವಿ.ಸದಾನಂದ ಗೌಡ ಮಾತನಾಡುತ್ತಾ ಕ್ಷೇತ್ರದ ಮರುವಿಂಗಡಣೆಯನ್ನು ನಾವು ಎಂದೂ ವಿರೋಧಿಸಿಲ್ಲ. ಕ್ಷೇತ್ರಗಳ ಪುನರ್ವಿಂಗಡಣೆಯಿಂದ ಶೋಷಿತ ವರ್ಗಗಳಿಗೆ ಸಾಮಾಜಿಕ ನ್ಯಾಯ ಸಿಗಲಿದೆ, ಮೇ.28ರ ಒಳಗೆ ಚುನಾವಣೆ ನಡೆಸಬೇಕು ಎಂದರು.

(ದಟ್ಸ್‌ಕನ್ನಡ ವಾರ್ತೆ)

ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more