ನಿವೃತ್ತಿ ವಯಸ್ಸು ಹೆಚ್ಚಿಸಿ: ರಾಜ್ಯ ಸರ್ಕಾರಿ ನೌಕರರ ಆಗ್ರಹ

ಬೆಂಗಳೂರು, ಫೆ.20: ರಾಜ್ಯ ಸರ್ಕಾರಿ ನೌಕರರ ನಿವೃತ್ತಿ ವಯಸ್ಸನ್ನು 58ರಿಂದ 60 ವರ್ಷಕ್ಕೆ ಹೆಚ್ಚಿಸಬೇಕು ಮತ್ತು ಕೇಂದ್ರ ಸರ್ಕಾರಿ ನೌಕರರಿಗೆ ನೀಡುವ ವಿವಿಧ ಭತ್ಯೆಗಳನ್ನು ನಮಗೂ ಕೊಡಬೇಕೆಂದು ರಾಜ್ಯ ಸರ್ಕಾರಿ ನೌಕರರ ಸಂಘ ರಾಜ್ಯಪಾಲರನ್ನು ಬುಧವಾರ ಒತ್ತಾಯಿಸಿದೆ.

ರಾಜ್ಯ ಸರ್ಕಾರಿ ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಹಲವಾರು ಬಾರಿ ಮನವಿ ಸಲ್ಲಿಸಿದ್ದರೂ ರಾಜ್ಯ ಸರ್ಕಾರ ನಮಗೆ ಸ್ಪಷ್ಟ ಭರವಸೆ ನೀಡಿಲ್ಲ. ಅಧಿಕಾರಿಗಳೊಂದಿಗೆ ಚರ್ಚಿಸಿ ಶೀಘ್ರ ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ರಾಜ್ಯಪಾಲ ರಾಮೇಶ್ವರ್ ಠಾಕೂರ್ ಅವರನ್ನು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಲ್. ಭೈರಪ್ಪ ಪತ್ರಿಕಾಗೋಷ್ಠಿಯಲ್ಲಿ ಇಂದು ಒತ್ತಾಯಿಸಿದರು.

ನೌಕರರ ವಿವಿಧ ಬೇಡಿಕೆಗಳು:
*ಐದನೇ ವೇತನ ಆಯೋಗದ ಅಂತಿಮ ವರದಿಯಲ್ಲಿನ ಶಿಫಾರಸುಗಳನ್ನು ಜಾರಿಗೊಳಿಸಿ.
*ಜಿಲ್ಲೆಯಿಂದ ಜಿಲ್ಲೆಗೆ ವರ್ಗಾವಣೆಯಾಗುವ ಶಿಕ್ಷಕರು ಹಾಗೂ ನೌಕರರಿಗೆ ಅವರು ಹಿಂದಿನ ಜಿಲ್ಲೆಯಲ್ಲಿ ಹೊಂದಿದ್ದ ಸೇವಾ ಅವಧಿಯನ್ನು ಪರಿಗಣಿಸಿ ಬಡ್ತಿ ನೀಡಿ.
*ರೋಗ್ಯ ಭಾಗ್ಯ ಯೋಜನೆಯಡಿ ಸವಲತ್ತು ಕಲ್ಪಿಸಿ.
*ಗ್ರಾಮ ಸೇವಕರಾಗಿ ಸೇವೆ ಸಲ್ಲಿಸುತ್ತಿರುವ 'ಡಿ' ದರ್ಜೆ ನೌಕರರನ್ನು ಖಾಯಂಗೊಳಿಸಿ.

ರಾಜ್ಯ ಸರ್ಕಾರಿ ನೌಕರರ ಖಜಾಂಚಿ ಚೌಡಯ್ಯ, ಸಂಘದ ಉಪಾಧ್ಯಕ್ಷರಾದ ಪಟೇಲ್ ಪಾಂಡೆ ಮುಂತಾದವರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

(ದಟ್ಸ್‌ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+