ಬೆಂಗಳೂರಲ್ಲಿ ನ್ಯಾನೋ ತಂತ್ರಜ್ಞಾನ ಸಂಸ್ಥೆ ಸ್ಥಾಪನೆ

ಚೆನ್ನೈ, ಫೆ.28: ನ್ಯಾನೋ ತಂತ್ರಜ್ಞಾನದಲ್ಲಿ ಆಳವಾದ ಸಂಶೋಧನೆ ನಡೆಸಲು ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಬೆಂಗಳೂರು, ಕೋಲ್ಕತ್ತಾ ಮತ್ತು ಮೊಹಾಲಿಯಲ್ಲಿ ರಾಷ್ಟ್ರೀಯ ಸಂಶೋಧನಾ ಸಂಸ್ಥೆಗಳನ್ನು ಸ್ಥಾಪಿಸಲಿದೆ.

ನ್ಯಾನೋ ವಿಜ್ಞಾನ ಮತ್ತು ತಂತ್ರಜ್ಞಾನ ಕುರಿತ 3 ದಿನಗಳ ಅಂತಾರಾಷ್ಟ್ರೀಯ ಸಮ್ಮೇಳನವನ್ನು ಬುಧವಾರ ಉದ್ಘಾಟಿಸಿ ಮಾತನಾಡಿದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಕಾರ್ಯದರ್ಶಿ ಡಾ.ಟಿ.ರಾಮಸ್ವಾಮಿನ್ಯಾನೋ ತಂತ್ರಜ್ಞಾನದ ಪ್ರಮುಖ ಕ್ಷೇತ್ರಗಳಲ್ಲಿ ಸಂಶೋಧನೆ ಮಾಡಲಾಗುವುದು ಎಂದು ಹೇಳಿದರು.

ಭಾರತದಲ್ಲಿನ ನ್ಯಾನೋ ತಂತ್ರಜ್ಞಾನ ಸಂಶೋಧನೆಗೆ ಅಮೆರಿಕ 100 ಕೋಟಿ ಡಾಲರ್ ವೆಚ್ಚ ಮಾಡಲಿದೆ. ವಿಜ್ಞಾನ-ತಂತ್ರಜ್ಞಾನ ಇಲಾಖೆ 5 ವರ್ಷಗಳ ನ್ಯಾನೋ ಮಿಷನ್‌ಗೆ 1000 ಕೋಟಿ ರೂ. ವ್ಯಯಿಸಲಿದೆ. ಈಗಾಗಲೇ ಈ ಕ್ಷೇತ್ರದಲ್ಲಿ 500 ಕೋಟಿ ರೂ. ಬಂಡವಾಳ ಹೂಡಲಾಗಿದೆ ಎಂದು ರಾಮಸ್ವಾಮಿ ತಿಳಿಸಿದರು.

ನ್ಯಾನೋ ತಂತ್ರಜ್ಞಾನ ತುಂಬಾ ಉತ್ತೇಜನಕಾರಿಯಾದ ವಿಷಯ, ಜೊತೆಗೆ ರಸಾಯನಶಾಸ್ತ್ರ, ಭೌತಶಾಸ್ತ್ರ, ಜೈವಿಕ ತಂತ್ರಜ್ಞಾನ, ಕೃಷಿ ಕ್ಷೇತ್ರಗಳಲ್ಲಿ ಅದ್ಭುತ ಸಾಧನೆಗಳನ್ನು ಮಾಡಬಹುದು. ನ್ಯಾನೋ ತಂತ್ರಜ್ಞಾನದಲ್ಲಿ ಭಾರತ ಪ್ರಮುಖ ಪಾತ್ರ ವಹಿಸುತ್ತಿದೆ ಎಂದು ಜವಹರ್ ಲಾಲ್ ನೆಹರು ಆಧುನಿಕ ವೈಜ್ಞಾನಿಕ ಸಂಶೋಧನೆಗಳ ಕೇಂದ್ರದ ರಾಷ್ಟ್ರೀಯ ಸಂಶೋಧನಾ ಪ್ರಾಧ್ಯಾಪಕರಾದ ಸಿಎನ್‌ಆರ್ ರಾವ್ ಹೇಳಿದರು. ಸಮ್ಮೇಳನದಲ್ಲಿ ಅಣು ಶಕ್ತಿ ಆಯೋಗದ ಅಧ್ಯಕ್ಷ ಅನಿಲ್ ಕಾಕೋಡ್ಕರ್ ಕೂಡ ಉಪಸ್ಥಿತರಿದ್ದರು.

(ಏಜೆನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+